ಸ್ವ ಉದ್ಯೋಗಿಗಳಾಗಿ: ವಿಶ್ವನಾಥ ಭಟ್ ಕರೆ
ಮಣಿಪಾಲ: ಸ್ವಯಂ ಉದ್ಯೋಗ ಮಾಡಲು ಸಾಕಷ್ಟು ಅವಕಾಶಗಳು ಇವೆ. ಸರ್ಕಾರದ ಯೋಜನೆಗಳನ್ನು ಉಪಯೋಗಿಸಿಕೊಂಡು ಯಶಸ್ವಿ ಸ್ವಯಂ ಉದ್ಯೋಗಿಗಳಾಗಬೇಕು ಎಂದು ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಾಜಿ ಅಧ್ಯಕ್ಷ ವಿಶ್ವನಾಥ್ ಭಟ್ ಕರೆ ನೀಡಿದ್ದಾರೆ.
ಇಲ್ಲಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಉಡುಪಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಜಿದಾರರಿಗೆ ಉದ್ಯಮಶೀಲತಾ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪ್ರಾಸ್ತಾವಿಕ ಮಾತನಾಡಿದ ಜಂಟಿ ನಿರ್ದೇಶಕ ನಾಗೇಶ ಮಾತನಾಡಿ, ಕಳೆದ ಬಾರಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಲ್ಲಿ ಸಾಕಷ್ಟು ಅರ್ಜಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಬಾರದೇ ಇದ್ದ ಕಾರಣ ಹೆಚ್ಚಿನ ಅರ್ಜಿಗಳನ್ನು ನೀರಿಕ್ಷಿಸಿ ಈ ಕಾರ್ಯಕ್ರಮ ಆಯೋಜಿಸಲಾಯಿತು ಎಂದರು.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಲ್ಲಿ ವಾಣಿಜ್ಯ ಬ್ಯಾಂಕ್ ಮೂಲಕ ರು. 5 ಲಕ್ಷವರೆಗೂ ಆರ್ಥಿಕ ನೆರವು, ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ರು. 2 ಲಕ್ಷ ಸಹಾಯಧನ, ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಲ್ಲಿ ಗರಿಷ್ಠ ಆರ್ಥಿಕ ಸಹಾಯ ರು. 25 ಲಕ್ಷ, ಸಹಾಯಧನ ರು. 8.75 ಲಕ್ಷ ಪಡೆದು ವಿವಿಧ ಉದ್ಯಮ, ಸೇವಾ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಸಾಕಷ್ಟು ಅವಕಾಶಗಳಿವೆ ಎಂದು ಅವರು ಹೇಳಿದರು.
ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಬೋಜರಾಜ ಶೆಟ್ಟಿ ಉದ್ಘಾಟಿಸಿದರು. ಉಪಾಧ್ಯಕ್ಷ ಐ. ಆರ್. ಫೆರ್ನಾಂಡಿಸ್ ಇದ್ದರು. ಎಸ್.ಎಚ್. ಮಹೇಶ್ವರಪ್ಪ ಸ್ವಾಗತಿಸಿದರು. ಸೀತಾರಾಮ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

