ಪ್ರತ್ಯೇಕ ಮಹಿಳಾ ಪೊಲೀಸ್ ಠಾಣೆಗೆ ಆಗ್ರಹಿಸಿ ಮನವಿ
ಉಡುಪಿ: ನಗರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಠಾಣೆ ತೆರೆಯುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ರಾಜ್ಯ ಗೃಹ ಸಚಿವ ಕೆ.ಜೆ. ಜಾರ್ಜ್ ಅವರನ್ನು ಆಗ್ರಹಿಸಿದೆ.
ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಮಂಗಳವಾರ ಉಡುಪಿಗೆ ಆಗಮಿಸಿದ್ದ ಸಚಿವರಿಗೆ ಮನವಿ ಸಲ್ಲಿಸಿದರು.
2011ರ ಜನಗಣತಿಯಂತೆ ರಾಜ್ಯದಲ್ಲಿಯೆ ಅತೀ ಹೆಚ್ಚು ಮಹಿಳೆಯರಿರುವ ಜಿಲ್ಲೆ ಉಡುಪಿ. ಅಲ್ಲದೇ ಉಡುಪಿಯು ಸುಪ್ರಸಿದ್ಧ ಪ್ರವಾಸಿ ಮತ್ತು ಯಾತ್ರಾಸ್ಥಳವಾಗಿದ್ದು, ಇಲ್ಲಿಗೆ ಬರುವ ಯಾತ್ರಾರ್ಥಿ - ಪ್ರವಾಸಿಗರಲ್ಲಿ ಬಹುಪಾಲು ಮಹಿಳೆಯರೇ ಆಗಿದ್ದಾರೆ.
ಆದರೆ, ಉಡುಪಿ ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯ, ಸರಗಳ್ಳತನ, ಮಾನ ಹಾನಿಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಮಹಿಳೆಯರ ಆತ್ಮಸ್ಥೈರ್ಯ ಕುಂದುತ್ತಿದೆ. ಅಲ್ಲದೆ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ದೂರು ನೀಡಲು ಹಿಂಜರಿಕೆ: ಮಹಿಳೆಯರು ತಮ್ಮ ಮೇಲೆ ದೌರ್ಜನ್ಯಗಳಾದಾಗ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವುದಕ್ಕೆ ಹಿಂಜರಿಯುವ ಸ್ಥಿತಿ ಇದೆ. ಆದ್ದರಿಂದ ಮಹಿಳೆಯ ಪ್ರಾಣ, ಮಾನ, ಧನದ ರಕ್ಷಣೆಗಾಗಿ ಪ್ರತ್ಯೇಕ ಮಹಿಳಾ ಠಾಣೆ ನಗರದಲ್ಲಿ ಆರಂಭಿಸುವುದು ಅತ್ಯಗತ್ಯ ಎಂದು ಮನವಿಯಲ್ಲಿ ಹೇಳಿದ್ದಾರೆ.
ಮನವಿ ಸ್ವೀಕರಿಸಿದ ಸಚಿವರು, ಈ ಬಗ್ಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಉಡುಪಿ ಶಾಸಕರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

