ಪೊಲೀಸರೂ ಕಾನೂನಿನ ಚೌಕಟ್ಟಿನಲ್ಲಿರಬೇಕು: ಕೆ.ಜೆ.ಜಾರ್ಜ್
ಉಡುಪಿ: ಕೇವಲ ಕೆಲವು ಅದಕ್ಷ ಪೊಲೀಸರಿಂದಾಗಿ ಇಂದು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ, ಅಂತವರಿಗೆ ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪೊಲೀಸರಿಂದ ಯಾವುದೇ ತಪ್ಪುಗಳು ಘಟಿಸದಂತೆ ಕ್ರಮಕೈಗೊಳ್ಳುತ್ತೇವೆ ಎಂದು ರಾಜ್ಯ ಗೃಹ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪೊಲೀಸ್ ಠಾಣೆಗಳಿಗೆ ಏನೇ ದೂರುಗಳು ಬಂದರೂ ತಕ್ಷಣ ಅದನ್ನು ದಾಖಲು ಮಾಡಿಕೊಳ್ಳಬೇಕು ಎಂಬ ಆದೇಶವನ್ನು ಈಗಾಗಲೇ ಇಲಾಖೆಗೆ ನೀಡಿದ್ದೇನೆ.
ಪೊಲೀಸ್ ಇಲಾಖೆಯಲ್ಲಿ ಎಲ್ಲಾ ಕೆಲಸಗಳು ಕಾನೂನಿನ ಚೌಕಟ್ಟಿನೊಳಗೆ ನಡಿಯಬೇಕು. ಅದನ್ನು ಮೀರಿ ನಡೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಉಡುಪಿ ನಗರಕ್ಕೆ ಪ್ರತ್ಯೇಕ ಮಹಿಳಾ ಪೊಲೀಸ್ ಠಾಣೆ ಬೇಕೆಂಬ ಬೇಡಿಕೆ ಬಂದಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು.
ಬಿಜೆಪಿಯಿಂದ ದ್ವೇಷ ಬೀಜ: ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ ಮಾತನಾಡಿ, ರಾಜಕೀಯ ಲಾಭಗಳಿಸಲು ಬಿಜೆಪಿ ಸರ್ಕಾರ ಜಾತಿ - ಧರ್ಮಗಳ ನಡುವೆ ದ್ವೇಷದ ವಿಷ ಬೀಜಗಳನ್ನು ಬಿತ್ತಿತ್ತು. ಅದನ್ನು ನಿವಾರಿಸಿ ಜಾತಿ ಧರ್ಮಗಳನ್ನು ಬೆಸೆವ ಕೆಲಸ ಇಂದು ಕಾಂಗ್ರೆಸ್ ಸರ್ಕಾರದಿಂದ ನಡೆಯಬೇಕಾಗಿದೆ ಎಂದರು.
ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈ. ಹಿರಿಯಣ್ಣ, ಪಕ್ಷದ ನಾಯಕರಾದ ಶಂಕರ ಕುಂದರ್, ಸುಧೀರ್ ಹೆಗ್ಡೆ, ಬಿರ್ತಿ ರಾಜೇಶ್ ಶೆಟ್ಟಿ, ಭುಜಂಗ ಶೆಟ್ಟಿ, ಅಮೃತ್ ಶೆಣೈ, ಸರಸು ಬಂಗೇರ, ಜಯಶ್ರೀ ಕೃಷ್ಣರಾಜ್, ಕೇಶವ ಕೋಟ್ಯಾನ್, ವೆರೋನಿಕ ಕರ್ನೇಲಿಯೋ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

