ಉಡುಪಿ

ಶಿಕ್ಷಣಪ್ರೇಮಿ ಟಿ.ವಿ. ರಾವ್ ನಿಧನ

Published On :

ಉಡುಪಿ: ಉದ್ಯಮಿ, ರಾಜಕಾರಣಿ, ಶಿಕ್ಷಣ ಪ್ರೇಮಿಯಾಗಿದ್ದ ಟಿ.ವಿ. ರಾವ್ ಬುಧವಾರ ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಆರಂಭದಲ್ಲಿ ಶಿಕ್ಷಕರಾಗಿ, ನಂತರ ಮಟ್ಟು ಗ್ರಾಪಂ ಅಧ್ಯಕ್ಷರಾಗಿ, ಉದ್ಯಾವರದಲ್ಲಿ ಪ್ರೌಢಶಾಲೆ ಸ್ಥಾಪಿಸಿದ ರಾವ್, ದಶಕಗಳ ಕಾಲ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಅನೇಕ ಸಂಘ, ಸಂಸ್ಥೆ, ದೇವಾಲಯ ಸಮಿತಿಯಲ್ಲಿ ಸಕ್ರಿಯರಾಗಿದ್ದ ಅವರು ಉಡುಪಿಯಲ್ಲಿ ಖಾಸಗಿ ಆಸ್ಪತ್ರೆಯೊಂದನ್ನು ಸ್ಥಾಪಿಸಿ ಪ್ರಸಿದ್ಧರಾಗಿದ್ದಾರೆ.
1952ರಲ್ಲಿ ಉಡುಪಿಯಲ್ಲಿ ಭಾರಿ ಪ್ರವಾಹ ಬಂದು ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಾಗ, ಪುನರ್ವಸತಿ ಸಮಿತಿ ಅಧ್ಯಕ್ಷರಾಗಿ ಸಮರ್ಥವಾಗಿ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.
ಸ್ವತಃ ಯಕ್ಷಗಾನ ಭಾಗವತರಾಗಿದ್ದ, ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಟಿ.ವಿ. ರಾಯರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಸದಸ್ಯರು ಸಂತಾಪ ಸೂಚಿಸಿದ್ದಾರೆ. ಅವರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಹೊಟೇಲ್ ಮಹಮ್ಮದ್
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ಹೊಟೇಲ್ ಮಹಮ್ಮದ್ (85) ಅನಾರೋಗ್ಯದಿಂದ ಬುಧವಾರ ನಿಧನರಾದರು.
  ಮಹಮ್ಮದ್ ಅವರು ಮೇಗಿನಪೇಟೆಯಲ್ಲಿ ಹಲವು ವರ್ಷಗಳಿಂದ ಹೊಟೇಲ್ ವ್ಯಾಪಾರ ಮಾಡುತ್ತಿದ್ದು, 'ಹೊಟೇಲ್ ಮಹಮ್ಮದ್‌' ಎಂದೇ ಪ್ರಸಿದ್ಧರು. ಅವರಿಗೆ ನಾಲ್ವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.