ಉಡುಪಿ

ಮಣಿಪಾಲಕ್ಕೆ ಕೇರಳ ಮಹಿಳಾ ಆಯೋಗ

Published On :

ಮಣಿಪಾಲ: ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಮೇಲೆ ಮಣಿಪಾಲದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಿನ್ನೆಲೆಯಲ್ಲಿ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಹಾಗೂ ಸದಸ್ಯರು ಮಣಿಪಾಲಕ್ಕೆ ಶನಿವಾರ ಆಗಮಿಸಿದ್ದಾರೆ. ಆದರೆ, ಅವರನ್ನು ಭೇಟಿಯಾಗಲು, ಅವರ ಸಹಾಯ ಪಡೆಯಲು ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಹೆತ್ತವರು ನಿರಾಕರಿಸಿದ್ದಾರೆ.  
ಕೊನೆಗೆ 'ಬಂದ ದಾರಿಗೆ ಸುಂಕ ಇಲ್ಲ' ಎಂಬಂತೆ ಆಯೋಗದ ಸದಸ್ಯೆಯರು ಆಸ್ಪತ್ರೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆದು ಹಿಂದಿರುಗಿದ್ದು, ಕೇರಳ ಸರ್ಕಾರಕ್ಕೆ ಲಭ್ಯ ಮಾಹಿತಿಯಾಧಾರದಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ.  ತಾವು ವಿದ್ಯಾರ್ಥಿನಿಗೆ ಕಾನೂನು ನೆರವು ನೀಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೆವು. ಆದರೆ, ಆಕೆಯನ್ನು ಭೇಟಿ ಮಾಡುವುದಕ್ಕೆ ಅವಕಾಶವಾಗಲಿಲ್ಲ. ಆಕೆಯ ಆರೋಗ್ಯ ಸ್ಥಿರವಾಗಿದ್ದು, ಇನ್ನೊಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಆಕೆ ಬಿಡುಗಡೆಗೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಆಯೋಗದ ಸದಸ್ಯೆ ರೋಸಾ ಕುಟ್ಟಿ ಈ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿಯವರನ್ನೂ ಭೇಟಿಯಾಗುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.