ಸಾಲಿಗ್ರಾಮ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಸಾಲಿಗ್ರಾಮ: ಇಲ್ಲಿನ ಪಟ್ಟಣ ಪಂಚಾಯತ್ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಹಾಗೂ ಪ್ರಚಾರ ಸಭೆಯು ಭಾನುವಾರ ಸಂಜೆ ಸಾಲಿಗ್ರಾಮ ಬಸ್ ನಿಲ್ದಾಣದಲ್ಲಿ ಜರಗಿತು.
ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ಬಳಿಕ ಸ್ಥಳಿಯಾಡಳಿತ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡಿದೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ಗೆ ವಾರ್ಷಿಕ 2 ಕೋಟಿ ಅನುದಾನ ನೀಡಿದ್ದು, ಇದರಿಂದ ರಸ್ತೆ ನಿರ್ವಹಣೆ, ಚರಂಡಿ ಇತ್ಯಾದಿಗಳಿಗೆ ವಿನಿಯೋಗಿಸಲು ಸಹಕಾರ ನೀಡಿದೆ. ಇದಲ್ಲದೆ ಸರಕಾರ ಹಲವಾರು ಜನಪರ ಯೋಜನೆಗಳನ್ನು ನೀಡಿದೆ. ವಿರೋಧ ಪಕ್ಷದವರು ಕೇವಲ ಟೀಕೆ ಮಾಡುವುದರಲ್ಲೇ ತಮ್ಮ ಕಾಲಹರಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಎಂದೂ ಅಧಿಕಾರಕ್ಕಾಗಿ ಹುಟ್ಟಿಕೊಂಡ ಪಕ್ಷವಲ್ಲ. ಬದಲಾಗಿ ಅಭಿವೃದ್ಧಿಗಾಗಿ ಹುಟ್ಟಿದ್ದು. ಪಕ್ಷದಲ್ಲಿ ಕೆಲವೊಂದು ಗೊಂದಲಗಳು ಉಂಟಾಗಿದ್ದು ನಿಜವಾದರೂ, ಇಂದು ಅಧಿಕಾರಕ್ಕಾಗಿ ಆಸೆ ಪಟ್ಟವರು ಮತ್ತು ಅಹಂಕಾರ ತೋರಿಸಿದವರು ಪಕ್ಷದಿಂದ ಹೊರಹೋಗಿದ್ದಾರೆ. ಪಕ್ಷ ಸಂಪೂರ್ಣ ಹೊಸದಾಗಿ ತನ್ನ ಅಭಿವೃದ್ಧಿಯ ಕನಸಿನತ್ತ ಮುನ್ನುಗುತ್ತಿದೆ ಎಂದ ಅವರು ಮುಂದಿನ ಚುನಾವಣೆಯಲ್ಲಿ ಗೆದ್ದರೆ ಪಕ್ಷದ ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಪಕ್ಷ ಈಗಾಗಲೇ ಘೋಷಿಸಿದ್ದು ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಇನ್ನೂ ನಾಯಕನ ಆಯ್ಕೆಯಲ್ಲಿ ಗೊಂದಲದಲ್ಲಿದೆ. ಆದ್ದರಿಂದ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.
ಈ ಚುನಾವಣಾ ಪ್ರಚಾರ ಸಮಿತಿಯ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಶ್ಯಾಮಲಾ ಕುಂದರ್, ಜಿ.ಪಂ. ಸದಸ್ಯ ಗಣಪತಿ ಶ್ರೀಯಾನ್, ಸ್ಥಾನೀಯ ಸಮಿತಿ ಅಧ್ಯಕ್ಷ ಶ್ಯಾಮಸುಂದರ್ ನಾಯರಿ, ಅಭ್ಯರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

