ಡಾ.ಪಿ.ವಿ.ಭಂಡಾರಿಗೆ ಮದ್ಯಪಾನ ಮಂಡಳಿ ಸಂಯಮ ಪ್ರಶಸ್ತಿ
ಉಡುಪಿ: ರಾಜ್ಯ ಮದ್ಯಪಾನ ಸಂಯಮ ಮಂಡಳಿಯ “ಸಂಯಮ ಪ್ರಶಸಿ ’ ಪ್ರದಾನ ಸಮಾರಂಭ 15ರಂದು ಉಡುಪಿಯ ಪುರಭವನದಲ್ಲಿ ನಡೆಯಲಿದೆ.
ಈ ಬಾರಿ ಮದ್ಯಪಾನ ವಿಮುಕ್ತಿಗಾಗಿ ಕೆಲಸ ಮಾಡುತ್ತಿರುವ ಉಡುಪಿಯ ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿಗೆ ಈ ಪ್ರಶಸ್ತಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರದಾನ ಮಾಡಲಿದ್ದಾರೆ.
ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಹೆಗಡೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥರು ಸಾನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸುರುವರು. ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಹೆಗಡೆ ಆಶಯ ಭಾಷಣ ಮಾಡುವರು. ಈ ಸಂದರ್ಭ “OÚßt¥Úß ಮತದಾನ ÈÚáÛsÚ·æÞt’ ಎಂಬ ವಿಶೇಷ ಕರಪತ್ರವನ್ನು ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು ಬಿಡುಗಡೆ ಮಾಡಲಿದ್ದಾರೆ.
ಪ್ರಶಸ್ತಿ ಹಿನ್ನೆಲೆ: ಲಕ್ಷ ರುಪಾಯಿ ಮೊತ್ತದ ಈ ಪ್ರಶಸ್ತಿಯನ್ನು ಮೊದಲ ವರ್ಷ ಡಾ. ವೀರೇಂದ್ರ ಹೆಗ್ಗಡೆಗೆ, 2ನೇ ವರ್ಷ ಇಳಕಲ್ ಮಹಾಂತ (ಜೋಳಿಗೆ ಸ್ವಾಮೀಜಿ)ಗೆ ಪ್ರದಾನ ಮಾಡಲಾಗಿದ್ದು, 3ನೇ ಪ್ರಶಸ್ತಿಯನ್ನು ಡಾ. ಭಂಡಾರಿಗೆ ನೀಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಉಡುಪಿ ಜಿಲ್ಲಾ ನಿರ್ದೇಶಕ ದುಗ್ಗೇಗೌಡ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಕೆ. ದೇವದಾಸ ಹೆಬ್ಬಾರ್ ಇದ್ದರು.
ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ
ಸ್ಥಾಪನಾ ದಿನಾಚರಣೆ ಸಲುವಾಗಿ ಕಾರ್ಪೊರೇಷನ್ ಬ್ಯಾಂಕ್ ಮುಂಜಾನೆ ವಾಯುವಿಹಾರಕ್ಕೆ ತೆರಳುವ ನಾಗರಿಕರಿಗೆ ಒಂದು ವಾರದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಬುಧವಾರ ಕದ್ರಿ ಪಾರ್ಕ್ನಲ್ಲಿ ಚಾಲನೆ ನೀಡಲಾಯಿತು. ಶುಕ್ರವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಆರೋಗ್ಯ ತಪಾಸಣೆ ಶಿಬರವನ್ನು ಹಮ್ಮಿಕೊಳ್ಳಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

