ಪಡುಬಿದ್ರಿ: ಮಲ್ಲಿಗೆ ಬೆಳೆ ತರಬೇತಿ, ಪ್ರಾತ್ಯಕ್ಷಿಕೆ
ಪಡುಬಿದ್ರಿ: ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ ಮತ್ತು ಜಿಲ್ಲಾ ಕೃಷಿ ಇಲಾಖೆ ಆಶ್ರಯದಲ್ಲಿ ಆತ್ಮ ಯೋಜನೆಯಡಿ ಇತ್ತೀಚೆಗೆ ಮಜೂರು ಗ್ರಾಮದಲ್ಲಿ 'ಉಡುಪಿ ಮಲ್ಲಿಗೆಯಲ್ಲಿ ವೈಜ್ಞಾನಿಕ ಬೇಸಾಯ ತರಬೇತಿ ಮತ್ತು ಪ್ರಾತ್ಯಕ್ಷಿಕೆ' ಇತ್ತೀಚೆಗೆ ನಡೆಯಿತು. ಮಜೂರು ಗ್ರಾ.ಪಂ. ಉಪಾಧ್ಯಕ್ಷೆ ಆಮೃತಾ ಶೆಟ್ಟಿ ಉದ್ಘಾಟಿಸಿದರು. ಸಮಾಜಸೇವಕ ಲೀಲಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಜೂರು ಗ್ರಾ.ಪಂ. ಕಾರ್ಯದರ್ಶಿ ಅನುಪಮ ಶೆಟ್ಟಿ ಇದ್ದರು.
ನಾಳೆ 'ಹಿರಿಯರೆಡೆಗೆ ಸಾಹಿತ್ಯದ ನಡಿಗೆ'
ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಭಾನುವಾರ ಹಾಲಾಡಿಯಲ್ಲಿ ನಡೆಯಲಿದೆ. ಹಾಲಾಡಿಯ ಎಚ್. ಜಯವಂತ ಕಾಮತ್ ಅವರ ನಿವಾಸ ದೇವಗಿರಿಯ ವಠಾರದಲ್ಲಿ ಸಂಜೆ 4.30 ಕ್ಕೆ ನಡೆಯುವ ಈ ವಿನೂತನ ಸಾಹಿತ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕಸಾಪ ಅಧ್ಯಕ್ಷ ಕುಂದಾಪುರ ನಾರಾಯಣ ಖಾರ್ವಿ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಅರ್ಥಧಾರಿ ಮತ್ತು ಸಮಾಜ ಸೇವಕ ಜಯವಂತ ಕಾಮತ್ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೃಷಿಕ ಡಾ. ಸಂಜೀವ ಶೆಟ್ಟಿ, ಹಾಲಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಖ್ಯೋಪಾಧ್ಯಾಯಿನಿ ರೋಷನ್ ಬೀಬಿ, ಸ್ಥಳೀಯ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ. ಜಯರಾಮ ಶೆಟ್ಟಿ ಉಪಸ್ಥಿತರಿರುವರು. ಆಸಕ್ತರಿಗೆ ಉಚಿತ ಪ್ರವೇಶವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

