ಅವಕಾಶಗಳನ್ನು ಗುರುತಿಸಿ ಮುನ್ನಡೆಯಿರಿ: ಡಾ. ಹೆಗ್ಗಡೆ
ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಅವಕಾಶಗಳು ಎಲ್ಲೆಡೆ ಇರುತ್ತವೆ. ಆದರೂ, ಅದನ್ನು ಗುರುತಿಸಿ ಮುನ್ನಡೆಯುವ ಜಾಣ್ಮೆ ವಿದ್ಯಾರ್ಥಿಗಳಿರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಇತ್ತೀಚೆಗೆ ಎಸ್ಡಿಎಂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಹೆಚ್ಚಿನ ವಿದ್ಯಾರ್ಥಿಗಳು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಸಮಯದ ಸದುಪಯೋಗ ಕಡಿಮೆಯಾಗುತ್ತಿದೆ. ಜೊತೆಗೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳ ನಡುವಿನ ಸಂಬಂಧಗಳು ಕುಸಿಯುತ್ತಿದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ ಸಿ.ಎಸ್. ಶರ್ಮ, ಎಸ್ಡಿಎಂ ಕಾಲೇಜು ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ. ಇಂತಹ ಪ್ರಯತ್ನಗಳು ಎಲ್ಲಾ ಕಾಲೇಜುಗಳಲ್ಲಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ವಿಶೇಷ ಸಾಧನೆಗೈದ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು. ಬಳಿಕ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನ ರಂಜಿಸಿತು. ಪ್ರಾಂಶುಪಾಲ ಡಾ.ಬಿ. ಯಶೋವರ್ಮ, ಎಸ್ಡಿಎಂ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದ್ದರು. ಡಾ.ಬಿ. ಯಶೋವರ್ಮ ಸ್ವಾಗತಿಸಿ, ಉಪನ್ಯಾಸಕ ಕೃಷ್ಣಮೂರ್ತಿ ವಂದಿಸಿದರು. ಡಾ.ಬಿ.ಪಿ. ಸಂಪತ್ ಕುಮಾರ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

