24ರಂದು ವಿಶ್ವ ನುಡಿಸಿರಿ ವಿರಾಸತ್ ಉಡುಪಿ ಘಟಕದ ಉದ್ಘಾಟನೆ
ಉಡುಪಿ: ವಿಶ್ವ ನುಡಿಸಿರಿ ವಿರಾಸತ್ ಇದರ ಉಡುಪಿ ಘಟಕದ ಉದ್ಘಾಟನಾ ಸಮಾರಂಭ ಮಾ. 24ರಂದು ಸಂಜೆ 5.30ಕ್ಕೆ ಕೃಷ್ಣ ಮಠದ ರಾಜಾಂಗಣದ ಮುಂಭಾಗದ ವಾಹನ ತಂಗುದಾಣದಲ್ಲಿ ನಡೆಯಲಿದೆ ಎಂದು ಉಡುಪಿಯ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಜಿಲ್ಲಾ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾರಂಭವನ್ನು ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್. ಪೈ ಉದ್ಘಾಟಿಸಲಿರುವರು. ನಂತರ ನಾಡಿನ ಶ್ರೀಮಂತಿಕೆಯನ್ನು ಅನಾವರಣಗೊಳಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ ಎಂದರು.
ಮೂಡಬಿದಿರೆಯಲ್ಲಿ - ಆಳ್ವಾಸ್ಸ್ವಿಶ್ವ ನುಡಿಸಿರಿ ವಿರಾಸತ್ 2013- ಬರುವ ಡಿ. 19,20,21 ಮತ್ತು 22 ರಂದು ನೆರವೇರಲಿದ್ದು, 4 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷ ಜನ ಭಾಗವಹಿಸುತ್ತಾರೆ ಎಂಬ ನಿರೀಕ್ಷೆ ಇದೆ ಎಂದ ಅವರು ದಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇರುವ ಸಹೃದಯ ಸಾಹಿತ್ಯ- ಸಂಸ್ಕೃತಿ ಪ್ರಿಯ ಸುಮನಸುಗಳನ್ನು ಒಟ್ಟುಗೂಡಿಸಿ ಬೃಹತ್ ಮಟ್ಟದ ಕಾರ್ಯಕ್ರಮದ ರೂಪುರೇಖೆಗಳನ್ನು ಅಂದಾಜಿಸಲು ಕೆಲವೊಂದು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಘಟಕದ ಉಪಾಧ್ಯಕ್ಷ ಜಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಭುವನ ಪ್ರಸಾದ್ ಹೆಗ್ಡೆ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ, ಸಂಘಟಕ ಈಶ್ವರ ಚಿಟ್ಪಾಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

