ಎಸ್ಸೆಸ್ಸೆಲ್ಸಿ: ಶೇ.100 ಫಲಿತಾಂಶ
ಉಡುಪಿ: ಉಚ್ಚಿಲದ ಶ್ರೀಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ 4ನೇ ಬಾರಿ ಶೇ.100 ಫಲಿತಾಂಶ ಪಡೆದಿದೆ. ಇಲ್ಲಿನ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಮುದರಂಗಡಿಯ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದಿದೆ. ಇಲ್ಲಿನ 50 ವಿದ್ಯಾರ್ಥಿಗಳಲ್ಲಿ 11 ಮಂದಿ ಉನ್ನತ ಶ್ರೇಣಿ ಪಡೆದಿದ್ದಾರೆ. ಡೆನಿನಾ ಡಿಸೋಜಾ 600 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಪಡುಬಿದ್ರಿಯ ಗಣಪತಿ ಪ್ರೌಢಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ ಗಳಿಸಿದ್ದು, 30 ವಿದ್ಯಾರ್ಥಿಗಳಲ್ಲಿ 3 ಮಂದಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪಡುಬೆಳ್ಳೆಯ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಸತತ 3ನೇ ಬಾರಿಗೆ ಶೇ.100 ಫಲಿತಾಂಶ ಪಡೆದಿದೆ. ಇಲ್ಲಿನ 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಅಕಾಶ್ ಮತ್ತು ರಮ್ಯಾಶ್ರೀ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಸ್ಕೂಲ್ ಸತತ 4ನೇ ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. ಉತ್ತಮ ಶ್ರೇಣಿಯಲ್ಲಿ 9 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ರೀನಾ ಶ್ವೇತಾ ಆಳ್ವ (595) ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ.
ಕುಂದಾಪುರದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶೇ.100 ಫಲಿತಾಂಶ ಪಡೆದಿದೆ. ಇಲ್ಲಿನ 138 ವಿದ್ಯಾರ್ಥಿಗಳಲ್ಲಿ 53 ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸುಪ್ರಿಯಾ ಜಿ. ಹೆಗ್ಡೆ (611) ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ.
ಹೂಡೆಯ ಸಾಲಿಹಾತ್ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆಗಳೆರಡೂ ಕೂಡ ಶೇ. 100 ಫಲಿತಾಂಶ ಪಡೆದಿದೆ. ಹನನ್ 575 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕುಂದಾಪುರದ ಶ್ರೀವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ಗಳಿಸಿದೆ. 53 ಮಂದಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸುಮೇದಾ ಶೆಣೈ 615 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

