ಆರೋಗ್ಯದ ಕುರಿತು ಜನಜಾಗೃತಿ ಅಗತ್ಯ: ಪ್ರೊ.ಬಲ್ಲಾಳ್
ಉಡುಪಿ: ಇಂದಿನ ಸಮಾಜದಲ್ಲಿ ಶಿಕ್ಷಣ, ಪರಿಸರ ಸ್ವಚ್ಛತೆ, ರಕ್ತದಾನ, ಆರೋಗ್ಯಕ್ಕೆ ಸಂಬಂಧ ಪಟ್ಟಂತಹ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸುವಂತ ಕೆಲಸಕಾರ್ಯಗಳು ತುರ್ತಾಗಿ ಆಗಬೇಕಾದ ಅನಿವಾರ್ಯತೆ ಇದೆ. ಇಂತಹ ಕೆಲಸಗಳಲ್ಲಿ ಸಂಘ ಸಂಸ್ಥೆಗಳು ಕೈಗೂಡಿಸುವುದು ಅವಶ್ಯಕ ಎಂದು ಮಣಿಪಾಲ ವಿವಿ ಸಹಕುಲಪತಿ ಪ್ರೊ.ಎಚ್.ಎಸ್. ಬಲ್ಲಾಳ್ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಇಲ್ಲಿನ ರೆಡ್‌ಕ್ರಾಸ್ ಭವನದಲ್ಲಿ ಜರಗಿದ 'ವಿಶ್ವ ರೆಡ್‌ಕ್ರಾಸ್ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯವಾಗಿ ಯುವಕರು ಇವುಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಇಂತಹ ಸಮಾಜಸೇವಾ ಕಾರ್ಯದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇ ಬೇಕು, ಸಾಯುವ ಮೊದಲು ಒಳ್ಳೆಯ ಕೆಲಸಗಳನ್ನು ಮಾಡಿ ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಶರ್ಮ ಮಾತನಾಡಿ, ರಸ್ತೆ ಅಪಘಾತ ಸೇರಿದಂತೆ ಇನ್ನಿತರ ಕೆಲವು ಸಂದರ್ಭದಲ್ಲಿ ಜನರಿಗೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ತಿಳಿದಿಲ್ಲ, ಇದರಿಂದ ವಿಪತ್ತಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆ ಕೌಶಲ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಹಾಗೂ ಅಗತ್ಯತೆ ಇದೆ. ರೆಡ್‌ಕ್ರಾಸ್ ಈ ಬಗ್ಗೆ ಕೆಲವೊಂದು ಯೋಜನೆಗಳನ್ನು ಹಾಕಿಕೊಂಡಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಜಿಲ್ಲಾ ಖಜಾಂಚಿ ಚಂದ್ರಶೇಖರ್, ಯುಪಿಸಿಎಲ್ ಉಪಮಹಾಪ್ರಬಂಧಕ ಕೆ. ನಾಗರಾಜ್ ಇದ್ದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಉಮೇಶ್ ಪ್ರಭು ಸ್ವಾಗತಿಸಿದರು.
ಜಯರಾಮ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಜಾರ್ಜ್ ಸ್ಯಾಮುವಲ್ ವಂದಿಸಿದರು. ಈ ಸಂದರ್ಭದಲ್ಲಿ ಅಶಕ್ತ ಅಂಗವಿಕಲ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

