ಬಂಟ್ವಾಳ: ಎಐಟಿಯುಸಿಯಿಂದ ಮೇ ದಿನಾಚರಣೆ
ಬಂಟ್ವಾಳ: 127 ವರ್ಷಗಳ ಇತಿಹಾಸ ಹೊಂದಿರುವ ಮೇ ದಿನಾಚರಣೆ ಕಾರ್ಮಿಕ ವರ್ಗದ ಪವಿತ್ರ ದಿನವಾಗಿದ್ದರೂ ಆಡಳಿತಾರೂಢ ಸರ್ಕಾರಗಳ ಕಾರ್ಮಿಕ ವಿರೋಧಿ ತಪ್ಪು ಧೋರಣೆಗಳಿಂದ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಎಐಟಿಯುಸಿ ರಾಜ್ಯ ಮುಖಂಡರಾದ ಪಿ. ಸಂಜೀವ ಅಭಿಪ್ರಾಯಪಟ್ಟರು.
ಅವರು ಇತ್ತೀಚೆಗೆ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಭವನದಲ್ಲಿ ಬಂಟ್ವಾಳ ಎಐಟಿಯುಸಿ ಆಶ್ರಯದಲ್ಲಿ ಜರುಗಿದ ಮೇ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
1886ರ ಸಂದರ್ಭ ಅಮೆರಿಕಾದ ಚಿಕಾಗೋ ನಗರದ ಕಾರ್ಮಿಕರು ಸಾಮ್ರಾಜ್ಯಶಾಹಿ ಆಡಳಿತದ ಎದುರು 8 ಗಂಟೆ ಕೆಲಸ, 8 ಗಂಟೆ ವಿಶ್ರಾಂತಿ, 8 ಗಂಟೆ ಮನರಂಜನೆಗಾಗಿ ಬೇಡಿಕೆ ಇಟ್ಟು ತ್ಯಾಗಬಲಿದಾನ ಹೊಂದಿ ಜಯಗಳಿಸಿದ ದಿನವೇ ಮೇ 1. ಈ ದಿನ ಮುಂದೆ ಸಾರ್ವತ್ರಿಕ ರಜೆ ಘೋಷಣೆಯಾಗಿ ಕಾರ್ಮಿಕರಿಗೆ ಸಂಬಳ ಸಹಿತ ರಜೆ ಜಾರಿಯಲ್ಲಿದೆ. ಆದರೆ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ಕಾನೂನು ಕಾಯ್ದೆಗಳು ತಿದ್ದುಪಡಿಗೊಂಡು ಕಾರ್ಮಿಕರು ಸಿಗುವ ಸವಲತ್ತುಗಳಿಂದ ವಂಚನೆಗೊಳಗಾಗುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಕಾರ್ಮಿಕರು ತಮ್ಮ ವರ್ಗಜಾಗೃತಿಯನ್ನು ಮೈಗೂಡಿಸಿಕೊಂಡು ಐಕ್ಯತೆಯನ್ನು ಕಾಯ್ದುಕೊಳ್ಳಬೇಕಾಗಿದೆ ಎಂದರು.
ಎಐಟಿಯುಸಿ ದ.ಕ. ಮತ್ತು ಉಡುಪಿ ಜಿಲ್ಲಾ ಅಧ್ಯಕ್ಷ ವಿ. ಕುಕ್ಯಾನ್ ಮಾತನಾಡಿ ಇತ್ತೀಚೆಗೆ ಫೆಬ್ರವರಿ ತಿಂಗಳ 20, 21 ರಂದು 2 ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಅಭೂತಪೂರ್ವ ಯಶಸ್ವಿಯಾಗಿದ್ದು ಕಾರ್ಮಿಕ ವರ್ಗದ ಐಕ್ಯತೆಯನ್ನು ಪ್ರದರ್ಶಿಸಿದೆ ಎಂದ ಅವರು ಆಡಳಿತಾರೂಢ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿದ ಕೀರ್ತಿ ಎಐಟಿಯುಸಿ ಕಾರ್ಮಿಕ ಸಂಘಟನೆಗೆ ಸಲ್ಲುತ್ತದೆ ಎಂದು ತಿಳಿಸಿದರು.
ಈ 48 ಘಂಟೆಗಳ ಮುಷ್ಕರದಲ್ಲಿ ಕೇಂದ್ರದ ಎಲ್ಲಾ ಪ್ರಮುಖ ಕಾರ್ಮಿಕ ಸಂಘಟನೆಗಳು ತನ್ನ ಪಕ್ಷ ಭೇದ ತತ್ವ ಸಿದ್ಧಾಂತಗಳನ್ನು ಬದಿಗಿರಿಸಿ ಕಾರ್ಮಿಕವರ್ಗದ ಪ್ರಮುಖ ಬೇಡಿಕೆಗಳಿಗಾಗಿ ಈ ಮುಷ್ಕರದಲ್ಲಿ ಸಂಪೂರ್ಣ ಭಾಗವಹಿಸಿರುವುದು ಐತಿಹಾಸಿಕ ಚರಿತ್ರೆಯನ್ನೇ ನಿರ್ಮಿಸಿದೆ ಎಂದ ಅವರು ಮುಂದಿನ ದಿನಗಳಲ್ಲಿ ಕಾರ್ಮಿಕರ ನೆಮ್ಮದಿಯ ನಾಳೆಗಾಗಿ ಐಕ್ಯವಾಗಬೇಕಾಗಿದೆ ಎಂದರು.
ಸಭೆಯನ್ನು ಉದ್ದೇಶಿಸಿ ಎಐಟಿಯುಸಿ ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ. ಶೇಖರ್ ಹಾಗೂ ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್ ಅಧ್ಯಕ್ಷೆ ಉಮಾವತಿ ಕುರ್ನಾಡು ಮಾತನಾಡಿದರು.
ದ.ಕ ಜಿಲ್ಲಾ ಹಂಚಿನ ಕೆಲಸಗಾರರ ಸಂಘದ ಅಧ್ಯಕ್ಷ ಕೆ. ಈಶ್ವರ್, ಬಂಟ್ವಾಳ ತಾಲೂಕು ಬೀಡಿ ಎಂಡ್ ಜನರಲ್ ಲೇಬರ್ ಯೂನಿಯನ್ ಅಧ್ಯಕ್ಷ ಡಿ. ಹೆನ್ರಿ ಲೋಬೋ ಉಪಸ್ಥಿತರಿದ್ದರು.
ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

