ಪ್ರತ್ಯೇಕ ಪ್ರಕರಣ: ಇಬ್ಬರು ಮದ್ಯವ್ಯಸನಿಗಳ ಆತ್ಮಹತ್ಯೆ
ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ ಇಬ್ಬರು ಮದ್ಯವ್ಯಸನಿಗಳು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೈಂದೂರು ಹೆರಂಜಾಲು ಗ್ರಾಮದ ಆಶ್ರಯ ಕಾಲನಿಯಲ್ಲಿ ಮದ್ಯಪಾನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ವೆಂಕಟೇಶ (55) ಮೃತರು. ಇವರು ವೃತ್ತಿಯಲ್ಲಿ ಮೀನುಗಾರರಾಗಿದ್ದು, ವಿಪರೀತ ಮದ್ಯಪಾನದ ಚಟ ಹತ್ತಿಸಿಕೊಂಡಿದ್ದರು. ಈ ಹಿಂದೆಯೂ ಒಮ್ಮೆ ವಿಪರೀತ ಮದ್ಯ ಸೇವನೆ ಮಾಡಿಕೊಂಡು ನೇಣು ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು. ಬುಧವಾರ ಮೀನುಗಾರಿಕೆಗೆ ರಜೆಯಾದ್ದರಿಂದ ವಿಪರೀತ ಮದ್ಯಸೇವನೆ ಮಾಡಿ ಮನೆಯಲ್ಲಿಯೇ ಇದ್ದರು. ನಂತರ ಸಂಜೆ ಮನೆಯ ಕಂಪೌಂಡಿನೊಳಗೆ ಇರುವ ಗೇರು ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಮಗ ಜನಾರ್ದನ ಮೊಗವೀರ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೃದ್ಧ ಆತ್ಮಹತ್ಯೆ: ಇನ್ನೊಂದು ಪ್ರಕರಣದಲ್ಲಿ ನಲ್ಲೂರು ಗ್ರಾಮದ ಮಂಜಲ್ತಾರ್ ಎಂಬಲ್ಲಿ ಮದ್ಯವ್ಯಸನಿ ವೃದ್ಧ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶೀನ ದೇವಾಡಿಗ (80) ಮೃತರು. ಇವರು ವಿಪರೀತ ಶರಾಬು ಸೇವಿಸುವ ಚಟ ಹೊಂದಿದ್ದು, ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಆವರಣವಿಲ್ಲದ ಬಾವಿಯೊಳಗೆ ಬಾವಿಯ ಅಡ್ಡೆಗೆ ನೀರು ಸೇದುವ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಮಗ ನಿತ್ಯಾನಂದ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

