ಎರ್ಮಾಳು ಗರೋಡಿಯಲ್ಲಿ ಕಳವು
ಪಡುಬಿದ್ರಿ: ಇಲ್ಲಿನ ಎರ್ಮಾಳು ತೆಂಕ ಸಂದ್‌ದಾಂತಿ ಬ್ರಹ್ಮಬೈದರ್ಕಳ ಗರೋಡಿಯ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ಸಾವಿರಾರು ರುಪಾಯಿ ನಗದನ್ನು ಕಳವು ಮಾಡಿದ್ದಾರೆ.
ರಾ.ಹೆ. 66ರ ಪಕ್ಕದಲ್ಲಿರುವ ಈ ಗರೋಡಿಯ ಎದುರಿನ ದ್ವಾರದ ಚಿಲಕ ಮುರಿದು ಕಳ್ಳರು ಒಳಪ್ರವೇಶಿಸಿ, ಒಳಗಿದ್ದ 2 ಕಾಣಿಕೆ ಡಬ್ಬಿಯನ್ನು ತೆರೆದು ಅದರಲ್ಲಿ ರು. 10 ಸಾವಿರ ನಗದನ್ನು ಕದ್ದೊಯ್ದಿದ್ದಾರೆ. ಶನಿವಾರ ಬೆಳಗ್ಗೆ ಭಕ್ತರು ಕೈ ಮುಗಿಯಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರಾದ ಎಲ್ಲದಡಿ ಶಿವಪ್ರಸಾದ್ ಶೆಟ್ಟಿ ಪಡುಬಿದ್ರಿ ಠಾಣೆಗೆ ದೂರವಾಣಿ ಮೂಲಕ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿಯ ಶ್ವಾನದಳ ಬೆರಳಚ್ಚು ತಜ್ಞರು ಆಗಮಿಸಿ ಕಳ್ಳರ ಬೆರಳಚ್ಚನ್ನು ಸಂಗ್ರಹಿಸಿದ್ದಾರೆ. ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಶಿವಾನಂದ ವಾಲೀಕರ್ ಹಾಗೂ ಪಡುಬಿದ್ರಿ ಠಾಣಾಧಿಕಾರಿ ಮಹಾದೇವ ಶೆಟ್ಟಿ ಭೇಟಿ ನೀಡಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪರಿಸರದಲ್ಲಿ ಇತ್ತೀಚೆಗೆ ಕಳ್ಳತನದ ಪ್ರಕರಣಗಳು ಹೆಚ್ಚು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಪರಿಸರದಲ್ಲಿ ಸಂಶಯಾಸ್ಪದವಾಗಿ ವರ್ತಿಸುವ, ಗುರುತು ಪರಿಚಯ ಇಲ್ಲದವರು ಕಂಡು ಬಂದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ತಿಳಿಸುವಂತೆ ಕಾಪು ವೃತ್ತ ನಿರೀಕ್ಷಕ ವಾಲಿಕರ್ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

