ಉಡುಪಿ

ಕೋಳಿ ಸಾಕಣೆ ತರಬೇತಿ: ಅರ್ಜಿ ಆಹ್ವಾನ

Published On :

ಬ್ರಹ್ಮಾವರ: ಇಲ್ಲಿನ ರುಡ್‌ಸೆಟ್ ಸಂಸ್ಥೆ ವತಿಯಿಂದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಟ್ರಸ್ಟ್, ಸಿಂಡಿಕೇಟ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಬ್ರಹ್ಮಾವರ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ವ್ಯಾಪ್ತಿಯಲ್ಲಿ ಬರುವ 18ರಿಂದ 45 ವರ್ಷ ವಯೋವುತಿಯೊಳಗಿನ, ಸ್ವಉದ್ಯೋಗ ಮಾಡಲು ಆಸಕ್ತಿ ಉಳ್ಳ ನಿರುದ್ಯೋಗಿ ಯುವಕ- ಯುವತಿಯರಿಗಾಗಿ ಕೋಳಿ ಸಾಕಣೆ ತರಬೇತಿ ಜೂ.10ರಿಂದ 15ರವರೆಗೆ ಮತ್ತು ಹೈನುಗಾರಿಕೆ ತರಬೇತಿ ಜೂ.17ರಿಂದ 22ರವರೆಗೆ ಆಯೋಜಿಸಲಾಗಿದೆ. ತರಬೇತಿಯಲ್ಲಿ ಸಂಬಂಧಪಟ್ಟ ವಿಷಯದೊಂದಿಗೆ ಉದ್ಯಮ ನಿರ್ವಹಣೆ ಮತ್ತು ಬ್ಯಾಂಕಿನ ವ್ಯವಹಾರದ ಬಗ್ಗೆ ಮಾಹಿತಿ ನೀಡಲಾಗುವುದು. ಆಸಕ್ತರು ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ಪಡೆಯಲಿಚ್ಛಿಸುವ ತರಬೇತಿ ವಿವರಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, 52ನೇ ಹೆರೂರು, ಬ್ರಹ್ಮಾವರ, ಉಡುಪಿ ಜಿಲ್ಲೆ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 0820- 2563455 ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆ ನಿರ್ದೇಶಕ ವಿಜಯಕುಮಾರ ನೆರ್ಲೇಕರ್ ತಿಳಿಸಿದ್ದಾರೆ.
ಕಾಂತೇಶ್ವರ ಪ್ರೌಢಶಾಲೆಗೆ ಶೇ.91.68 ಫಲಿತಾಂಶ
ಕಾರ್ಕಳ: ಇಲ್ಲಿನ ಕಾಂತಾವರದ ದೇಶವ ನಗರದಲ್ಲಿರುವ ಶ್ರೀಕಾಂತೇಶ್ವರ ಪ್ರೌಢಶಾಲೆಯು ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.91.68 ಫಲಿತಾಂಶ ಪಡೆದಿದೆ. ಸಂಸ್ಥೆಯ ವಿದ್ಯಾರ್ಥಿಗಳಾದ ನಿತಿನ್ ಕುಲಾಲ್ (582), ನಿಶಾನ್ ಶೆಟ್ಟಿ (572), ಶ್ರೇಯಾ (570), ಜೆನಿಫರ್ ಪಿರೇರ (559), ದೀಕ್ಷಿತಾ (559) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ 32 ವಿದ್ಯಾರ್ಥಿಗಳು ಹಾಜರಾಗಿದ್ದು, 29 ಮಂದಿ ಉತ್ತೀರ್ಣರಾಗಿದ್ದಾರೆ. ಅವರಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಮತ್ತು 8 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.