ಉಡುಪಿ

ಉತ್ತಮ ಯೋಜನೆ ರೂಪಿಸಲು ಆರ್ಥಿಕ ಗಣತಿ ಅಗತ್ಯ: ಕುಮಾರ್

Published On :


ಮಣಿಪಾಲ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕರಿಗೆ ಅನುಕೂಲವಾಗುವಂತಹ ಉತ್ತಮ ಯೋಜನೆಗಳನ್ನು ರೂಪಿಸಲು ಆರ್ಥಿಕ ಗಣತಿಯಲ್ಲಿ ಸಂಗ್ರಹಿಸಲಾದ ನಿಖರವಾದ ಮಾಹಿತಿಗಳು ಅತ್ಯಂತ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಅವರು ತಿಳಿಸಿದ್ದಾರೆ.
ಅವರು ಬುಧವಾರ ಜಿಪಂ ಕಚೇರಿಯಲ್ಲಿ 6ನೇ ರಾಷ್ಟ್ರೀಯ ಆರ್ಥಿಕ ಗಣತಿ ಕುರಿತು ಮಾಸ್ಟರ್ ಟ್ರೈನಿಗಳು ಮತ್ತು ಮೇಲ್ವಿಚಾರಕರಿಗಾಗಿ ಏರ್ಪಡಿಸಿದ್ದ 2 ದಿನಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈ ಗಣತಿ ಕಾರ್ಯವು ಜೂ. 1ರಿಂದ 30ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಆರ್ಥಿಕ ಚಟುವಟಿಕೆ ನಡೆಯುವ ಪ್ರತಿಯೊಂದು ಉದ್ಯಮಗಳ, ಘಟಕಗಳ, ಸರ್ಕಾರಿ ಕಚೇರಿಗಳ ಮತ್ತು ಅಲ್ಲಿ ಕಾರ್ಯ ನಿರ್ವಹಿಸುವ ನೌಕರರ ಗಣತಿ ಕಾರ್ಯ ನಡೆಯಲಿದೆ. ಇದಕ್ಕಾಗಿ 741 ಜನಗಣತಿ ಬ್ಲಾಕುಗಳನ್ನು ಗುರುತಿಸಿ 367 ಮಂದಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಈ ಆರ್ಥಿಕ ಗಣತಿ ಕಾರ್ಯಕ್ರಮ ಒಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಗಣತಿ ಸಮಯದಲ್ಲಿ ಆಗಮಿಸುವ ಸಿಬ್ಬಂದಿಗೆ ನಿಖರವಾದ ಮಾಹಿತಿಯನ್ನು ನೀಡುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುರೇಶ್ ರಾವ್, ಸಹಾಯಕ ಸಾಂಖ್ಯಿಕ ಅಧಿಕಾರಿ ನಾಗರಾಜ್ ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರರು, ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.