ಕೋಟಿ ಚೆನ್ನಯರ ಜನ್ಮಸ್ಥಳ ಅಭಿವೃದ್ಧಿಗೆ ಕ್ರಮ: ಸೊರಕೆ
ಪುತ್ತೂರು: ಕೋಟಿ ಚೆನ್ನಯರ ಜನ್ಮಸ್ಥಳವಾದ ಪಡುಮಲೆ ಬಿಲ್ಲವ ಸಮುದಾಯದ ಭಕ್ತಿಯ ಕೇಂದ್ರವಾಗಿದ್ದು, ಇಲ್ಲಿರುವ ಕೋಟಿ ಚೆನ್ನಯರ ಕುರುಹುಗಳನ್ನು ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ವತಿಯಿಂದ ಮಂಗಳವಾರ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಸಚಿವ ವಿನಯ ಕುಮಾರ್ ಸೊರಕೆ ಅವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪುತ್ತೂರಿನ ಅಭಿವೃದ್ಧಿ ನಿಟ್ಟಿನಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದ ಸೊರಕೆ, ತನಗೆ ರಾಜಕೀಯವಾಗಿ ಭವಿಷ್ಯವಿತ್ತ ಪುತ್ತೂರು ಸಾಕಷ್ಟು ಅಭಿವೃದ್ಧಿಯಾಗಬೇಕು ಎಂದರು.
ಶೋಷಣೆ, ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಜನ ಬಯಸಿರುವ ಹಿನ್ನೆಲೆಯಲ್ಲಿ ಈ ಬಾರಿ ಬದಲಾವಣೆಯಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ಪುತ್ತೂರಿಗೆ ಬಂಪರ್ ಅವಕಾಶ ದೊರೆತಿದೆ. ತಾನು ಸೇರಿದಂತೆ ಸಚಿವರಾದ ರಮಾನಾಥ ರೈ ಪುತ್ತೂರಿನ ಬೆಳ್ಳಿಪ್ಪಾಡಿಯವರು, ಯು.ಟಿ. ಖಾದರ್, ಅಭಯಚಂದ್ರರಿಗೂ ಪುತ್ತೂರಿನ ನಂಟಿದೆ. ಜೆ.ಆರ್. ಲೋಬೋ ಪುತ್ತೂರಲ್ಲಿ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಿದವರು ಎಂದು ನೆನಪಿಸಿಕೊಂಡರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕಿ ಶಕುಂತಳಾ ಶೆಟ್ಟಿ, ಎಲ್ಲ ಸಮಾಜದವರನ್ನು ಸಮಾನ ದೃಷ್ಟಿಯಿಂದ ನೋಡಿ ಅಭಿವೃದ್ಧಿ ಪಡಿಸಲಾಗುವುದು. ಪಡುಮಲೆಯನ್ನು ಭಕ್ತಿ-ಶಕ್ತಿ ಕೇಂದ್ರ ಮಾಡಲು ಪ್ರಯತ್ನಿಸುದಾಗಿ ತಿಳಿಸಿದರು.
ಬಿಲ್ಲವ ಸಂಘದ ಅಧ್ಯಕ್ಷ ಕೆ.ಪಿ. ದಿವಾಕರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ವೇದನಾಥ ಸುವರ್ಣ ಮತ್ತು ಉಷಾ ಅಂಚನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

