ಹೆಬ್ರಿ: ಕರವೇಯಿಂದ ರಾಜ್ಯೋತ್ಸವ
ಹೆಬ್ರಿ: ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ 58ನೇ ಕನ್ನಡ ರಾಜ್ಯೋತ್ಸವ ಆಚರಣೆ ಹೆಬ್ರಿ ಬಸ್ ತಂಗುದಾಣ ಬಳಿ ಶುಕ್ರವಾರ ನಡೆಯಿತು.
ಜಿಲ್ಲಾ ಕರವೇ ಮುಖಂಡ ಸಿ.ಎಂ. ಪ್ರಸನ್ನ ಕುಮಾರ್ ಮಾತನಾಡಿ, ಕನ್ನಡ ಧ್ವಜ ಸಂಹಿತೆ ಶೀಘ್ರ ಜಾರಿಗೆ ಬರಬೇಕು. ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಅಭಿಮಾನ ಮೂಡಿಸಿಕೊಂಡು ಶುದ್ಧ ಕನ್ನಡ ಮಾತನಾಡುವ ಪ್ರವೃತ್ತಿ ಬೆಳೆಯಬೇಕು ಎಂದರು.
ಹೆಬ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ನರಸಿಂಹ ನಾಯಕ್ ಕನ್ನಡ ಧ್ವಜಾರೋಹಣಗೈದರು. ಉದ್ಯಮಿ ಎಚ್. ಭಾಸ್ಕರ ಜೋಯಿಸ್, ಹೆಬ್ರಿ ಠಾಣಾಕಾರಿ ಸೀತಾರಾಮ ಪಿ. ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ಹೆಬ್ರಿ ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಕೆ.ಜಿ. ಸುಧಾಕರ್, ಗಂಗಾಧರ ರಾವ್, ಟಿ.ಜಿ. ಆಚಾರ್ಯ, ಲಯನ್ಸ್ ಅಧ್ಯಕ್ಷ ರಮೇಶ್ ಆಚಾರ್ಯ, ಹೆಬ್ರಿ ಕರವೇ ಘಟಕ ಅಧ್ಯಕ್ಷ ನಿತೀಶ್ ಎಸ್.ಪಿ., ರಿಕ್ಷಾ ಚಾಲಕ, ಮಾಲೀಕರ ಸಂಘದ ಅಧ್ಯಕ್ಷ ಪ್ರಭಾಕರ ಪೂಜಾರಿ, ಟ್ಯಾಕ್ಸಿಮೆನ್ ಎಸೋಸಿಯೇಶನ್ ಅಧ್ಯಕ್ಷ ಭಾಸ್ಕರ ಶೆಟ್ಟಿ, ವಿಜೇಂದ್ರ ಶೆಟ್ಟಿ, ರಾಜೇಶ್ ಕೆಪ್ಲಿ, ಸುರೇಶ್ ಭಂಡಾರಿ, ಕಲಾವಿದ ಹೆಬ್ರಿ ಜನಾರ್ದನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

