ನಾಳೆ ಕೃಷಿ ಸಚಿವ ಪ್ರವಾಸ
ಉಡುಪಿ: ರಾಜ್ಯದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು 8ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿ, ಕೃಷಿ ಹಾಗೂ ಜಲಾನಯನ ಇಲಾಖಾ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.
ಪಣಿಯಾಡಿ ಮಹಿಳಾ ಮಂಡಳಿಗೆ ಆಯ್ಕೆ
ಉಡುಪಿ: ಪಣಿಯಾಡಿ ಮಹಿಳಾ ಮಂಡಳಿಯ ನೂತನ ಅಧ್ಯಕ್ಷರಾಗಿ ಗೀತ ರವಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಟಿ. ರಾಧಮ್ಮ, ಉಪಾಧ್ಯಕ್ಷರಾಗಿ ಶೋಭಾ ಶಾಂತಾರಾಮ್, ಪ್ರಧಾನ ಕಾರ್ಯದರ್ಶಿಯಾಗಿ ಶಕುಂತಳಾ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೈಲಜಾ, ಕ್ರೀಡಾ ಕಾರ್ಯದರ್ಶಿಯಾಗಿ ವಸಂತಿ ಸೇರಿಗಾರ್, ಕೋಶಾಧಿಕಾರಿಯಾಗಿ ಉಷಾ ಜಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ಶಾದಿ ಭಾಗ್ಯ ಎಸ್ಸಿಎಸ್ಟಿಗೂ ನೀಡಲು ಆಗ್ರಹ
ಉಡುಪಿ: ಮುಸ್ಲಿಂ ಮಹಿಳೆಯರಿಗೆ ಮಾತ್ರ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನೂತನ ಬಿದಾಯಿ ಯೋಜನೆಯನ್ನು ರಾಜ್ಯದ ಎಲ್ಲಾ ಪರಿಶಿಷ್ಟ ಜಾತಿಗಳ ಮಹಿಳೆಯರಿಗೂ ನೀಡುವಂತೆ ಉಡುಪಿ ಜಿಲ್ಲಾ ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಕುಮಾರ್ ಅಂಬಲಪಾಡಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಕೇವಲ ಓಟ್ ಬ್ಯಾಂಕ್ ರಾಜಕಾರಣ ಮಾಡುವುದನ್ನು ಬಿಟ್ಟು ಸಮಾಜದ ಎಲ್ಲಾ ವರ್ಗದ ಬಡ ಮಹಿಳೆಯರಿಗೂ ಈ ಸೌಲಭ್ಯ ದೊರಕಲಿ. ರಾಜ್ಯ ಸರ್ಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪರಿಶಿಷ್ಟ ಜಾತಿಯವರಿಂದ ಬೃಹತ್ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಎದುರಿಸಬೇಕಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

