ಸಮಿತಿಗಳಿಗೆ ಸೂಕ್ತ ಸದಸ್ಯರ ನಾಮನಿರ್ದೇಶನ; ಸೊರಕೆ ಸೂಚನೆ
ಉಡುಪಿ: ತಾಲೂಕು-ಜಿಲ್ಲಾ ಮಟ್ಟದಲ್ಲಿ ನಗರಸಭೆ, ಪುರಸಭೆ, ಅಕ್ರಮ-ಸಕ್ರಮ ಸಮಿತಿ, ಭೂನ್ಯಾಯ ಮಂಡಳಿ ಮುಂತಾದ ಸಮಿತಿಗಳಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ ಕಾರ್ಯ ಈಗಾಗಲೇ ಆರಂಭವಾಗಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಶಾಸಕರು, ಪಕ್ಷದ ಪ್ರಮುಖರು ಚರ್ಚಿಸಿ ಸೂಕ್ತ ಸದಸ್ಯರ ಹೆಸರು ಸೂಚಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಪಕ್ಷದ ನಾಯಕರಿಗೆ ಕರೆ ನೀಡಿದ್ದಾರೆ.
ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಡಿಸಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿ ಬ್ಲಾಕ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶಗಳನ್ನು ನಡೆಸಲಾಗುವುದು. ಪಕ್ಷದ ಸದಸ್ಯತನದ ಅಭಿಯಾನ ಆರಂಭಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕಾಗಿದೆ ಎಂದರು.
ಬೂತ್ ಮಟ್ಟದಲ್ಲಿ ಮತದಾರರ ಸೇರ್ಪಡೆ ಕಾರ್ಯ ಚುರುಕುಗೊಳಿಸಿ, 18 ವರ್ಷ ತುಂಬಿದವರ ಹೆಸರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರಿಸುವ ಮತ್ತು ವಿಳಾಸ ಬದಲಾವಣೆಯಾಗಿರುವ ಮತದಾರರ ವಿವರ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.
ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಪ್ರಮೋದ್ ಮಧ್ವರಾಜ್ ಮಾತನಾಡಿದರು.
ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಅಶೋಕಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೇರೋನಿಕಾ ಕರ್ನೇಲಿಯೋ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕೇಶವ ಎಂ. ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಪಿ. ಮೊಯಿದಿನಬ್ಬ, ಜಿಲ್ಲಾ ಇಂಟಕ್ ಅಧ್ಯಕ್ಷ ಮುರಲಿ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಮೃತ್ ಶೆಣೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಕುಂದಾಪುರ, ಶಂಕರ್ ಕುಂದರ್ ಕೋಟ, ಬಿರ್ತಿ ರಾಜೇಶ್ ಶೆಟ್ಟಿ ಬ್ರಹ್ಮಾವರ, ಸುಧೀರ್ ಹೆಗ್ಡೆ ಕಾಪು ಉತ್ತರ, ನವೀನಚಂದ್ರ ಜೆ. ಶೆಟ್ಟಿ ಕಾಪು ದಕ್ಷಿಣ ಸಲಹೆ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ವರದಿ ಮಂಡಿಸಿದರು.
ಪ್ರಧಾನ ಕಾರ್ಯದರ್ಶಿ ಜನಾರ್ದನ ತೋನ್ಸೆ ನಿರ್ವಹಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

