ಮಾಲಿನ್ಯ ವಿರುದ್ಧ 5 ಕಿ.ಮೀ. ಮಾನವ ಸರಪಣಿ
ಮಣಿಪಾಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ, ಉಡುಪಿಯ ಲಯನ್ಸ್ ಕ್ಲಬ್ ಸದರ್ನ್ ಸ್ಟಾರ್ ಆಶ್ರಯದಲ್ಲಿ ಸೋಮವಾರ 'ಪರಿಸರ ಮಾಲಿನ್ಯದ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ' ಮಾನವ ಸರಪಣಿ ರಚಿಸಲಾಗಿತ್ತು.
ಮಣಿಪಾಲದ ಸಿಂಡಿಕೇಟ್ ವೃತ್ತದಿಂದ ಉಡುಪಿಯ ತನಕ ಸುಮಾರು 5 ಕಿ.ಮೀ. ಉದ್ದ ಮಾನವ ಸರಪಣಿಯನ್ನು ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ರಚಿಸಿದ್ದರು.
ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಜಿ. ಅರುಣ್ ಕುಮಾರ್ ಪೇಪರ್ ಚೀಲಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವರಿಷ್ಠರಾದ ಶಾಂತಾ ವಿ.ಎಸ್. ಆಚಾರ್ಯ, ಎಡ್ವಿನ್ ಪಿಂಟೋ, ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್, ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಡಾ. ವಿಜೇಂದ್ರ, ಸಾಧನಾ ಕಿಣಿ ಮಣಿಪಾಲ, ಸಮೃದ್ಧ ವಿಶೇಷ ಮಕ್ಕಳ ತರಬೇತಿ ಕೇಂದ್ರದ ಮುಖ್ಯಸ್ಥೆ ಭೂಮಿಕಾ ಪಹುಜ, ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಪೋಷಕರಾದ ಯು. ದಾಮೋದರ್, ಪ್ರೊ. ದಯಾನಂದ ಶೆಟ್ಟಿ, ಪಾಂಗಾಳ ರಬೀಂದ್ರ ನಾಯಕ್ ಇದ್ದರು. ಉಡುಪಿಯ ನಗರದ ವಿವಿಧ ಶಾಲೆಗಳಿಂದ ಸುಮಾರು 3,000 ಮಂದಿ ವಿದ್ಯಾರ್ಥಿಗಳು ಪರಿಸರ ಮಾಲಿನ್ಯ ಜಾಗೃತಿ ಫಲಕಗಳನ್ನು ಹಿಡಿದುಕೊಂಡು ಸರಪಣಿಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

