ಶಿಕ್ಷಕ ಲೋಕಾಯುಕ್ತ ಬಲೆಗೆ
ಬೆಳಗಾವಿ: ಶಿಕ್ಷಕನೊಬ್ಬ ಸೋಮವಾರ ಸಂಜೆ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ 16 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಶಿಕ್ಷಕನಾಗಿದ್ದು, ಪ್ರಸ್ತುತ ಸರ್ವ ಶಿಕ್ಷಣ ಅಭಿಯಾನದ ಪ್ರಭಾರಿ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಆರ್.ಕಾಮಕರ ಲೋಕಾಯುಕ್ತ ಬಲೆಗೆ ಬಿದ್ದವರು. ಸರ್ವ ಶಿಕ್ಷಣ ಯೋಜನೆಯಡಿ ಖಾನಾಪುರ ತಾಲೂಕಿನಲ್ಲಿ ಸ್ವಯಂ ಸೇವಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಇಬ್ಬರಿಗೆ ಐದಾರು ತಿಂಗಳಿಂದ ವೇತನವನ್ನು ನೀಡಿರಲಿಲ್ಲ. ಇದಲ್ಲದೇ ಅಂಗವಿಕಲ ಮಕ್ಕಳಿಗೆ ಪ್ರತಿ ತಿಂಗಳು ಸರ್ಕಾರ ನೀಡುವ 250 ಸಹ ನೀಡುತ್ತಿರಲಿಲ್ಲ. ವೇತನ ಹಾಗೂ ಅಂಗವಿಕಲರ ಹಣ ನೀಡಬೇಕಾದರೆ 16 ಸಾವಿರ ನೀಡಬೇಕು ಎಂದು ಕಾಮಕರ ಬೇಡಿಕೆಯಿಟ್ಟಿದ್ದರು.
ಖಾನಾಪುರ ತಾಲೂಕಿನ ಸ್ವಯಂಸೇವಕಿಯರಾಗಿರುವ ಬಸವ್ವ ಚನ್ನಬಸಪ್ಪ ಮೇಳೆದ ಮತ್ತು ಅವರ ಮಗಳು ಸುಧಾ ಮೇಳೆದ ನೀಡಿರುವ ದೂರಿನ ಹಿನ್ನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದರು. ಸೋಮವಾರ ಸಂಜೆ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬೀಸಿದ ಜಾಲದಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಎಸ್ಪಿ ಜಿ.ಆರ್.ಪಾಟೀಲ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

