ಉಡುಪಿ

ಶಿವಪುರ: ನಾಳೆ ಸಹಕಾರ ಸಪ್ತಾಹ ಸಮಾರೋಪ

Published On :

ಹೆಬ್ರಿ: 60ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಶಿವಪುರ ಡೈರಿ ಕಟ್ಟಡದ ವಾರ್ಷಿಕ ದಿನಾಚರಣೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ ನ.20ರಂದು ಬೆಳಗ್ಗೆಯಿಂದ ಶಿವಪುರ ಸಹಕಾರಿ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಶಿವಪುರ ಡೈರಿ ಅಧ್ಯಕ್ಷ ಸಹಕಾರಿ ಧುರೀಣ ಬಿಲ್ಲುಬೈಲು ಸುರೇಶ ಶೆಟ್ಟಿ ತಿಳಿಸಿದ್ದಾರೆ.
ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ಶಿವಪುರ ಹಾಲು ಉತ್ಪಾದಕರ ಸಹಕಾರಿ ಸಂಘ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ ಹೆಗ್ಡೆ ಉದ್ಘಾಟನೆ ನೆರವೇರಿಸುವರು. ಶಿವಪುರ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಬಿಲ್ಲುಬೈಲು ಸುರೇಶ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಹಕಾರ ಸಂಘಗಳ ಉಪನಿಬಂಧಕ ಆರ್.ಜೆ. ಕಾಂತರಾಜು ಸಮಾರೋಪ ಭಾಷಣ ಮಾಡುವರು.
ಹಾಲು ಉತ್ಪಾದಕರ ಒಕ್ಕೂಟ ನಿವೃತ್ತ ವ್ಯವಸ್ಥಾಪಕ ಡಿ.ಎಸ್. ಹೆಗ್ಡೆ ದಿಕ್ಸೂಚಿ ಭಾಷಣ ಮಾಡುವರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ವಿಜಯಲಕ್ಷ್ಮೀ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ. ಕರುಣಾಕರ ಶೆಟ್ಟಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ಬಿ.ವಿ. ಸತ್ಯನಾರಾಯಣ ಹಾಜರಿರುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.