ಸಹಕಾರ ರಂಗದಲ್ಲಿ ರಾಜಕೀಯ ಬೇಡ: ಹೆಗ್ಡೆ
ಹೆಬ್ರಿ: ಸಂಸ್ಥೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದಾಗ ಮಾತ್ರ ಸಹಕಾರ ಪದಕ್ಕೆ ಅರ್ಥ ಬಂದಂತಾಗುತ್ತದೆ. ಸಹಕಾರದಲ್ಲಿ ಎಂದೂ ರಾಜಕೀಯ ತರಬಾರದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದ್ದಾರೆ.
ಸಹಕಾರ ಸಪ್ತಾಹದ 4ನೇ ದಿನವಾದ ಭಾನುವಾರ ವರಂಗ ರಾಮಮಂದಿರದಲ್ಲಿ ವರಂಗ ಸಹಕಾರಿ ವ್ಯವಸಾಯಿಕ ಸಂಘ ಹಾಗು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಜಿ.ಪಂ. ಸದಸ್ಯ ಮಂಜುನಾಥ ಪೂಜಾರಿ ಮಾತನಾಡಿ, ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ನಿಗದಿಪಡಿಸಿ, ಆಹಾರ ಭದ್ರತೆ ನೀಡುವುದರೊಂದಿಗೆ ರೈತರ ಹಿತರಕ್ಷಣೆ ಕಾಪಾಡಿದಾಗ ಸಹಕಾರ ಎಂಬ ತತ್ವ ಸಾರ್ಥಕವಾದಂತೆ ಎಂದರು.
ಮುಖ್ಯ ಅತಿಥಿ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಬೂತ್ಗುಂಡಿ ಕರುಣಾಕರ ಶೆಟ್ಟಿ ಮಾತನಾಡಿ, ವರಂಗ ಸಂಘ ಶೇ.100 ಸಾಲ ವಸೂಲಾತಿಯೊಂದಿಗೆ ಅಭಿವೃದ್ಧಿಸಾಧಿಸಿದ್ದು ಕೇಂದ್ರದ ಪುರಸ್ಕಾರ ಕೂಡ ಲಭಿಸಿರುವುದು ಶ್ಲಾಘನೀಯ ಎಂದರು.
'ಪಂಚಾಯತ್ರಾಜ್ ಸಂಸ್ಥೆಗಳು- ಸಹಕಾರಿ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಆಹಾರ ಭದ್ರತೆ' ಕುರಿತು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ನೀರೆ ಕೃಷ್ಣ ಶೆಟ್ಟಿ ಮಾತನಾಡಿದರು. ವರಂಗ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ರವಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ 18 ವರ್ಷಗಳಿಂದ ನಿರಂತರ ಸಂಘದೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅಧ್ಯಕ್ಷರಾಗಿ, ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಹಿರಿಯ ಸಹಕಾರಿ ಎಂ. ಮಂಜುನಾಥ ಕಾಮತ್ ಅವರನ್ನು ಸನ್ಮಾನಿಸಲಾಯಿತು.
ವರಂಗ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹರೀಶ್ ಪೂಜಾರಿ, ಮುದ್ರಾಡಿ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ, ಸಹಕಾರಿ ಯೂನಿಯನ್ ಕಾರ್ಯ ನಿರ್ವಹಣಾಧಿಕಾರಿ ಎಚ್.ಬಿ. ಜಗದೀಶ್, ವರಂಗ ವ್ಯವಸಾಯಿಕ ಸಂಘದ ಉಪಾಧ್ಯಕ್ಷೆ ಆಶಾ ಎ. ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ, ಸಂತೋಷ್ ಕುಮಾರ್ ಶೆಟ್ಟಿ, ಸುಜಾತಾ ಲಕ್ಷ್ಮಣ ಆಚಾರ್ಯ, ಸಂಘದ ನಿರ್ದೇಶಕರಾದ ಪಡುಕೂಡುರು ಜಗದೀಶ್ ಹೆಗ್ಡೆ, ಇಂದಿರಾ, ಕೃಷ್ಣಕಾಂತ್, ರಮೇಶ್ ಇದ್ದರು.
ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೆ. ಸೀತಾರಾಮ ಹೆಬ್ಬಾರ್ ಅವರು ಕಾರ್ಯಕ್ರಮ ನಿರೂಪಿಸಿದರು. ವರಂಗ ವ್ಯವಸಾಯಿಕ ಸಂಘದ ನಿರ್ದೇಶಕ ಚಂದ್ರಶೇಖರ ಬಾಯರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

