ಕನಕದಾಸರು ಇಡೀ ಸಮುದಾಯದ ಮಹಾನ್ ವ್ಯಕ್ತಿ: ಉಪೇಂದ್ರ ನಾಯಕ್
ಮಣಿಪಾಲ: ಜಾತಿ ಪದ್ಧತಿ ವಿರುದ್ಧ ಹೋರಾಡಿದ ಮಹಾನ್ ವ್ಯಕ್ತಿಗಳು ಕೇವಲ ಒಂದು ವರ್ಗ ಮತ್ತು ಪಂಗಡಗಳಿಗೆ ಸೀಮಿತವಾಗಿರುವುದು ದುರಂತ ಎಂದು ಜಿಪಂ ಅಧ್ಯಕ್ಷ ಉಪೇಂದ್ರ ನಾಯಕ್ ವಿಷಾದ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಉಡುಪಿ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸೇವಾ ಸಂಘ ವತಿಯಿಂದ ಬುಧವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನಕದಾಸರು ಕೇವಲ ಕುರುಬ ಜನಾಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇಡೀ ಸಮುದಾಯದ ಮಹಾನ್ ವ್ಯಕ್ತಿ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಪ್ರಮೋದ್ ಮಧ್ವರಾಜ್, ಕನಕದಾಸರು, ಪುರಂದರದಾಸರು, ಬಸವಣ್ಣ ಇವರೆಲ್ಲರೂ ಕೂಡ ಜಾತಿಪದ್ಧತಿ ನಿರ್ಮೂಲನೆಗಾಗಿ ಹೋರಾಡಿದ ಮಹಾನ್ ವ್ಯಕ್ತಿಗಳು. ಜನರಲ್ಲಿರುವ ಮೇಲು- ಕೀಳು ಭಾವನೆಗಳನ್ನು ತೊಡೆದು ಹಾಕುವಲ್ಲಿ ಕನಕದಾಸರಂತಹ ದಾಸ ಶ್ರೇಷ್ಠರ ಕೊಡುಗೆ ನಿತ್ಯ ಸ್ಮರಣೀಯ ಎಂದರು.
ಮಲ್ಪೆ ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲ ಮೇಟಿ ಮುದಿಯಪ್ಪ ಮಾತನಾಡಿ, ಕನಕದಾಸ ಹಾಗೂ ಪುರಂದರದಾಸರು ಒಂದೇ ನಾಣ್ಯದ 2 ಮುಖಗಳು ಹಾಗೂ ಇವರ ಕೀರ್ತನೆಗಳು ಬದುಕಿನ ಸನ್ಮಾರ್ಗಕ್ಕಾಗಿ ರಚಿಸಲ್ಪಟ್ಟಿವೆ. ಶೋಷಿತ ವರ್ಗಗಳ ನೋವುಗಳನ್ನು ತಮ್ಮ ಕೀರ್ತನೆಯಲ್ಲಿ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ ಉತ್ತಮ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷೆ ಗೌರಿ ಪೂಜಾರ್ತಿ, ಜಿಲ್ಲಾಧಿಕಾರಿ ಎಂ.ಟಿ. ರೇಜು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ತಹಸೀಲ್ದಾರ್ ಟಿ.ಜೆ. ಗುರುಪ್ರಸಾದ್ ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅಂಕುಶ್ ಸ್ವಾಗತಿಸಿದರು. ನಳಿನಿ ಎಂ.ಆರ್. ನಿರೂಪಿಸಿದರು. ಕೆ.ಎಸ್. ಸದಾನಂದ ಕಾಪು ವಂದಿಸಿದರು.
ಶಾಸಕ ಪ್ರಮೋದ್ ಮಧ್ವರಾಜ್ ಕನಕದಾಸರ ಭಾವಚಿತ್ರಕ್ಕೆ ಹೂ ಮಾಲೆ ಹಾಕಿದರು. ಕಾರ್ಯಕ್ರಮದ ಮೊದಲು ಆಕಾಶವಾಣಿ ಕಲಾವಿದ ರವಿಕಿರಣ ಮತ್ತು ಬಳಗದವರು ಕನಕದಾಸರ ಕೀರ್ತನೆಗಳನ್ನು ಹಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

