ಉಡುಪಿ

ಭ್ರಷ್ಟಾಚಾರ ವಿರುದ್ಧ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಕಾಂಗ್ರೆಸ್

Published On :

ಉಡುಪಿ: ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರನ್ನು ವಿಂಗಡಿಸಿ ಕೋಮು ಸೌಹಾರ್ದವನ್ನು ಹಾಳುಗೆಡವಿ ಭಯೋತ್ಪಾದನೆ ಹುಟ್ಟು ಹಾಕುತ್ತಿರುವ ಬಿಜೆಪಿ ಭ್ರಷ್ಟಾಚಾರದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ದ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಿರುವಾಗ ಬಿಜೆಪಿ ಮುಖಂಡರಿಗೆ ಭಯೋತ್ಪಾದನೆ ಹಾಗೂ ಭ್ರಷ್ಟಾಚಾರದ ವಿರುದ್ಧ ಭಾರತ ಗೆಲ್ಲಿಸಿ ಎನ್ನಲು ಯಾವ ನೈತಿಕತೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಶ್ನಿಸಿದೆ.
 ಮೂಡನಂಬಿಕೆ ಪ್ರತಿಬಂಧಕ ಮಸೂದೆ ಪರಿಶೀಲನೆ ಹಂತದಲ್ಲಿರುವಾಗ ಮಸೂದೆಯನ್ನು ಸರ್ಕಾರ ಜಾರಿ ಮಾಡಿಬಿಟ್ಟದೆ ಎಂದು ವಿಪಕ್ಷ ನಾಯಕರು ಬೊಬ್ಬೆ ಹೊಡೆಯುತ್ತಿರುವುದು ಜನತೆಯನ್ನು ತಪ್ಪು ದಾರಿಗೆ ಕೊಂಡೊಯ್ಯುವ ಹುನ್ನಾರವಾಗಿದೆ. ಅಧಿಕಾರವನ್ನು ಜಗಳವಾಡಿ ಕಳೆದುಕೊಂಡೆವು ಎನ್ನುವ ಬಿಜೆಪಿ ರಾಜ್ಯವನ್ನು ಲೂಟಿ ಮಾಡಿದ್ದನ್ನು ಮರೆಮಾಚುತ್ತಿದ್ದಾರೆ. ಹಾಗೆಯೇ ಗರಿಷ್ಠ ಶಾಸಕರು, ಮಂತ್ರಿಗಳು, ಜೈಲು ಕಂಬಿ ಎಣಿಸಿದ್ದು ಬಿಜೆಪಿ ಆಡಳಿತಾವಧಿಯಲ್ಲಿಯೇ ಎಂದು ನೆನಪಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.