ಉಡುಪಿ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಸಭೆ

Published On :

ಉಡುಪಿ: ಬ್ರಹ್ಮಾವರ ಮತ್ತು ಕಟಪಾಡಿ ಸಮೀಪದಲ್ಲಿನ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫೆರ್ನಾಂಡಿಸ್ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸಂಸದ ಜಯಪ್ರಕಾಶ್ ಹೆಗ್ಡೆ ಭಾನುವಾರ ಸಭೆ ನಡೆಸಿ, ಚರ್ಚಿಸಿದರು.
ಕಟಪಾಡಿಯಲ್ಲಿ ರಸ್ತೆಯನ್ನು 2 ಬದಿಯಲ್ಲಿ ಒಂದು ಮೀಟರ್ ಆಳ ಮಾಡಿ ಪುನಃ ಜಲ್ಲಿ ತುಂಬಿಸಿ ಎರಡೂ ಬದಿಗೆ ಡಾಂಬರೀಕರಣ ಮಾಡುವುದರಿಂದ ರಸ್ತೆಯು ಮತ್ತೆ ಏರಿಕೆಯಾಗಲಿರುವುದು. ಇದರಿಂದ ಕಟಪಾಡಿ ಪೇಟೆಯಲ್ಲಿರುವ ವ್ಯಾಪಾರಸ್ಥರಿಗೆ ಹಾಗೂ ಜನರಿಗೆ ಅನುಕೂಲವಾಗಲಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಬ್ರಹ್ಮಾವರ ಆಕಾಶವಾಣಿ ವೃತ್ತದಿಂದ ಹಳೆ ಪೇಟೆಗೆ ಹೋಗಲು ಈಗ ಮಾಡಿದ ರಸ್ತೆಯಿಂದ ತೊಂದರೆಯಾಗಿರುವುದು ತಿಳಿದು ಬಂದಿರುವುದರಿಂದ ಇದನ್ನು ತಗ್ಗಿಸಿ ನೆಲ ಮಟ್ಟದಲ್ಲಿ ರಸ್ತೆ ನಿರ್ಮಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಯಪ್ರಕಾಶ್ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.