ಕೋಟೆ ಪ್ರಕರಣ ಮುಚ್ಚಿ ಹಾಕುವ ಹುನ್ನಾರ: ಕ್ರೈಸ್ತ ಒಕ್ಕೂಟ
ಉಡುಪಿ: ಕೋಟೆ ಗ್ರಾಪಂ ಅಧ್ಯಕ್ಷರ ಮೇಲೆ ಪೊಲೀಸ್ ವೃತ್ತ ನಿರೀಕ್ಷಕರು ನಡೆಸಿದ ಹಲ್ಲೆಯ ಬಗ್ಗೆ ಕಾಂಗ್ರೆಸ್ ಸರ್ಕಾರ ಅಥವಾ ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ಕರ್ನಾಟಕ ಕೈಸ್ತ ಸಂಘಟನೆಗಳ ಅಂತಾರಾಷ್ಟ್ರೀಯ ಒಕ್ಕೂಟದ ಖಂಡಿಸಿದೆ.
ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಲೂಯಿಸ್ ಲೋಬೋ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಹಲ್ಲೆಗೊಳಗಾದ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಜತ್ತನ್ ಅವರು ಚುನಾವಣೆ ಸಂದರ್ಭದಲ್ಲಿ ಸಚಿವ ವಿನಯಕುಮಾರ್ ಸೊರಕೆ ಅವರ ಗೆಲುವಿಗೆ ಹಗಲು ರಾತ್ರಿ ಹೋರಾಟ ನಡೆಸಿದ್ದಾರೆ. ಈಗ ಸಚಿವರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಪ್ರಕರಣವನ್ನು ಮುಚ್ಚಿಬಿಡುವ ಹುನ್ನಾರ ನಡೆಯುತ್ತಿರುವಂತೆ ಕಾಣುತ್ತಿದೆ ಎಂದವರು ಆರೋಪಿಸಿದರು.
ಈ ಘಟನೆಯ ಬಗ್ಗೆ ತಾವು ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ವೈ.ವಿ.ಎಸ್. ದತ್ತಾ ಅವರ ಗಮನಕ್ಕೆ ತಂದು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಯಾಗುವಂತೆ ಮಾಡುವುದಾಗಿ ಹೇಳಿದ ಲೋಬೋ, ಹಲ್ಲೆ ನಡೆಸಿದ ವೃತ್ತ ನಿರೀಕ್ಷಕರನ್ನು ರಜೆಯ ಮೇಲೆ ಕಳುಹಿಸಿದರೇ ಸಾಲದು. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ರೋಶನಿ ವಲಿವೇರಾ, ಪೀಟರ್ ದಾಂತಿ, ಗ್ಲಾಡ್ಸನ್ ಕರ್ಕಡ ಇದ್ದರು.
ಬಿಪಿಎಲ್ ಅಕ್ರಮ ಪತ್ತೆಗೆ ಜಾಗೃತ ದಳ
ಅನರ್ಹರು ಉದ್ದೇಶಪೂರ್ವಕವಾಗಿ ಬಿಪಿಎಲ್ ಪಡಿತರ ಚೀಟಿ ಮಾಡಿಸಿಕೊಂಡಿರುವುದು ಗಮನಕ್ಕೆ ಬಂದರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಉಡುಪಿ ತಹಸೀಲ್ದಾರ್ ಗುರುಪ್ರಸಾದ್ ಎಚ್ಚರಿಸಿದ್ದಾರೆ. ಅನರ್ಹರು ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಬಗ್ಗೆ ದೂರುಗಳಿವೆ. ಅಂತಹ ಪ್ರಕರಣಗಳನ್ನು ಪತ್ತೆ ಮಾಡುವುದಕ್ಕಾಗಿ ಜಾಗೃತ ದಳವನ್ನು ರಚಿಸಲಾಗಿದೆ. ಈ ದಳ ಈಗಾಗಲೇ ಕಟಪಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಈ ದಳ ಸರ್ವೇ ಆರಂಭಿಸಿದೆ ಎಂದವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

