ಉಡುಪಿ

ಆರ್ಟ್ ಆಫ್ ಲಿವಿಂಗ್‌ನಿಂದ ಮತದಾನ ಜಾಗೃತಿಗೆ ಕ್ರಿಯಾಯೋಜನೆ

Published On :

ಉಡುಪಿ: ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆ ಮತ್ತು ಅವರು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆಯನ್ನು ಖಾತ್ರಿ ಪಡಿಸಲು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮುಂದೆ ಬಂದಿದ್ದು, ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಬುಧವಾರ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಪ್ರಭಾಕರ ಶರ್ಮ ಅವರು ಸಭೆ ನಡೆಸಿದರು.
 ಚುನಾವಣಾ ಆಯೋಗ ಈಗಾಗಲೇ ಸುತ್ತೋಲೆಗಳನ್ನು ಕಳುಹಿಸಿದ್ದು, ಮತದಾರರ ಶಿಕ್ಷಣ ಮತ್ತು ಸಮರ್ಪಕ  ಪಾಲ್ಗೊಳ್ಳುವಿಕೆ ಕುರಿತು ಕ್ರಿಯಾಯೋಜನೆ ರೂಪಿಸಲು ಸೂಚಿಸಿದೆ. ಸರ್ಕಾರೇತರ ಸಂಘ ಸಂಸ್ಥೆಗಳ ಸಹಕಾರವನ್ನು ಪಡೆಯಲು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದ್ದು, ಅದರಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಮುಂದೆ ಬಂದಿದೆ.
 ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರತಿನಿಧಿಗಳು, ಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ (ವೋಟ್ ಫಾರ್ ಬೆಟರ್ ಇಂಡಿಯ) ಎಂಬ ಘೋಷಣೆಯೊಂದಿಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಕಾರ್ಯಕ್ರಮದ ಮೂಲಕ ಹಾಗೂ ಅವರಿಗೆ ಅಂಕಗಳನ್ನು ನೀಡುವ ಮೂಲಕ ಮತದಾನ ಜಾಗೃತಿಗೆ ಕ್ರಿಯಾಯೋಜನೆ ರೂಪಿಸಿರುವುದನ್ನು ಸಭೆಗೆ ತೋರಿಸಿದರು.  ಮ್ಯಾರಥಾನ್ ಮಾದರಿಯಲ್ಲಿ ವೋಟಥಾನ್ ಆಯೋಜನೆ, ವಿದ್ಯಾರ್ಥಿಗಳೊಳಗೆ ಮಾಹಿತಿ, ನಾಯಕರನ್ನು ರೂಪಿಸಿ ತಮ್ಮ ಸಹಪಾಠಿಗಳನ್ನು ಅಥವಾ ತಮ್ಮ ಸುತ್ತಮುತ್ತಲಿನವರನ್ನು ವಿದ್ಯಾರ್ಥಿಗಳ ಮೂಲಕ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಸಲು, ಮತದಾನದ ಬಗ್ಗೆ ಸುಶಿಕ್ಷಿತರನ್ನಾಗಿಸುವ ಬಗ್ಗೆ ಕ್ರಿಯಾಯೋಜನೆ ರೂಪಿಸಿದೆ ಎಂದು ಆರ್ಟ್ ಆಫ್ ಲಿವಿಂಗ್ ಪ್ರತಿನಿಧಿಗಳು ತಿಳಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮ ಅವರು, ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಡಿ ಮತದಾರರ ಶಿಕ್ಷಣಕ್ಕೆ ಹಾಗೂ ಜಾಗೃತಿಗೆ ಅಗತ್ಯವಿರುವ ಎಲ್ಲ ಯೋಜನೆಗಳಿಗೆ ಜಿಲ್ಲಾಡಳಿತ ಪೂರಕ ಸ್ಪಂದಿಸಲಿದೆ ಎಂದರು.
 ಸಭೆಯಲ್ಲಿ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮತ್ತು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಸನ್ನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.