ಉಡುಪಿ

ನಾಳೆಯಿಂದ ವಿವಿಧ ಕಾಲೇಜುಗಳಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

Published On :

ಹೆಬ್ರಿ: ಹೆಬ್ರಿ ವ್ಯಾಪ್ತಿಯ ವಿವಿಧ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಅ.4ರಿಂದ 12ರವರೆಗೆ ವಿವಿಧೆಡೆ ನಡೆಲಿದೆ.
ಮುನಿಯಾಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಅ.5ರಿಂದ 11ರವರೆಗೆ ವರಂಗ ಪದ್ಮಾಂಬ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವರಂಗ ರಾಮ ಮಂದಿರದಲ್ಲಿ ನಡೆಯಲಿದೆ. ಶಾಸಕ ವಿ. ಸುನಿಲ್ ಕುಮಾರ್ ಅ.5ರಂದು ಮಧ್ಯಾಹ್ನ 3 ಗಂಟೆಗೆ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಸಾಹಿತಿ ಅಂಬಾತನಯ ಮುದ್ರಾಡಿ ಅ.11ರಂದು ಬೆಳಗ್ಗೆ 10 ಗಂಟೆಗೆ ಸಮಾರೋಪ ಭಾಷಣ ಮಾಡಲಿದ್ದಾರೆ. ಶಿಬಿರದ ಅವಧಿಯಲ್ಲಿ ಶ್ರಮದಾನ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಬೇಬಿ ಕೆ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಬ್ರಿ ಸರ್ಕಾರಿ ಪಪೂ ಕಾಲೇಜಿನ ಎನ್‌ಎಸ್‌ಎಸ್ ವಿಶೇಷ ಶಿಬಿರ ಅ.4ರಿಂದ 10ರವರೆಗೆ ನಾಡ್ಪಾಲು-ಸೋಮೇಶ್ವರ ಪೇಟೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
 ಶಾಸಕ ವಿ. ಸುನಿಲ್ ಕುಮಾರ್ ಅ.4ರಂದು ಮಧ್ಯಾಹ್ನ 2 ಗಂಟೆಗೆ ಶಿಬಿರ ಉದ್ಘಾಟಿಸಲಿದ್ದಾರೆ. ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಹಿರಿಯಡ್ಕ ಸರ್ಕಾರಿ ಪಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ವಿಶೇಷ ಶಿಬಿರ ಅ.6ರಿಂದ 12ರ ವರೆಗೆ ಪಾಡಿಗಾರ ಬಣ್ಣಂಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆಯಲಿದೆ.
 ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಅ.6ರಂದು ಸಂಜೆ 4 ಗಂಟೆಗೆ ಶಿಬಿರ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಸಂಸದ ಜಯಪ್ರಕಾಶ್ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.