ಉಡುಪಿ

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ನೈತಿಕ ಆಧ್ಯಾತ್ಮಿಕ ಶಿಬಿರ

Published On :

ಕಾರ್ಕಳ: ಪ್ರತಿಯೊಬ್ಬ ವ್ಯಕ್ತಿಯೂ ಜೀವನದ ಮೌಲ್ಯಗಳನ್ನು ಇನ್ನೊಬ್ಬರಿಂದ ಅಪೇಕ್ಷಿಸುತ್ತಾನೆಯೇ ಹೊರತು ತಾನೂ ಅದನ್ನು ಅಳವಡಿಸಿಕೊಳ್ಳಬೇಕು ಎಂದುಕೊಳ್ಳುವುದಿಲ್ಲ. ಯಾವಾಗಲೂ ಇನ್ನೊಬ್ಬರು ಸತ್ಯಸಂದರಾಗಿರಬೇಕು, ಪ್ರಾಮಾಣಿಕರಾಗಿರಬೇಕು ಎಂದುಕೊಳ್ಳುತ್ತಾನೆ ಎಂದು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಶ್ರೀ ಜಿತಕಾಮನಂದಾಜೀ ಹೇಳಿದರು.
ಅವರು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆಯುತ್ತಿರುವ ಮೂರು ದಿನಗಳ ನೈತಿಕ ಮತ್ತು ಆಧ್ಯಾತ್ಮಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು. ನಮ್ಮ ಜೀವನ ಉತ್ತಮವಾಗಬೇಕಾದರೆ ಆಧ್ಯಾತ್ಮಿಕ ಮತ್ತು ನೈತಿಕ ಮೌಲ್ಯಗಳು ಅವಶ್ಯಕವಾಗುತ್ತವೆ. ಜೀವನ ಯಾವತ್ತೂ ಏಕಪಥವಲ್ಲ, ದ್ವಿಪಥ. ಎಲ್ಲರೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿತ್ವ ವಿಕಸನವಾಗುತ್ತದೆ. ಬದುಕಿನಲ್ಲಿ ಆತ್ಮವಿಶ್ವಾಸ ಇರುತ್ತದೆ ಹಾಗೂ ಸಮಸ್ಯೆಗಳನ್ನು ಎದುರಿಸುವ ಧೈರ್ಯ ಬರುತ್ತದೆ ಎಂದರು.
ಆಧ್ಯಾತ್ಮ ಎಂದರೆ ಅದು ದೇವಸ್ಥಾನದಲ್ಲಿ ಇರುವಂಥದ್ದಲ್ಲ. ಅದು ನಮ್ಮೊಳಗೇ ಇರುವಂಥದ್ದು. ದೇವರು ಮಾನವನಿಗೆ ನೀಡಿದ ಮಹತ್ವದ ಕೊಡುಗೆ ಮನಸ್ಸು. ಅದನ್ನು ಸದಾ ಹತೋಟಿಯಲ್ಲಿಟ್ಟುಕೊಂಡು ಒಳಗಡೆ ಇರುವ ಆತ್ಮನಲ್ಲಿಗೆ ಕೊಂಡೊಯ್ಯುವುದೇ ಆಧ್ಯಾತ್ಮ. ಇದನ್ನು ಆಧ್ಯಾತ್ಮಿಕ ಮತ್ತು ನೈತಿಕ ಮೌಲ್ಯಗಳು ತಿಳಿಸುತ್ತದೆ. ಯಾವಾಗಲೂ ನಮ್ಮ ಮನಸ್ಸು ನಮ್ಮ ಹತೋಟಿಯಲ್ಲಿರಬೇಕೇ ಹೊರತು ಅದರ ಹತೋಟಿಯಲ್ಲಿ ನಾವು ಇರುವುದಲ್ಲ ಎಂದರು.
ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಾಂಡುರಂಗ ನಾಯಕ್ ಸ್ವಾಗತಿಸಿದರು. ಶಿಬಿರದ ಸಂಯೋಜಕ ಡಾ.ದೇವಿದಾಸ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಪೂ ಕಾಲೇಜಿನ ಪ್ರಾಂಶುಪಾಲ ರಮೇಶ್ ವಂದಿಸಿದರು. ಡಾ. ಮಂಜುನಾಥ್ ಕೋಟ್ಯಾನ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.