ಉಡುಪಿ

ಕಾಂಗ್ರೆಸ್ ಕಚೇರಿ ನನಗೆ ದೇವಸ್ಥಾನವಿದ್ದಂತೆ: ಕಿಮ್ಮನೆ

Published On :

ಉಡುಪಿ: ಕಾಂಗ್ರೆಸ್ ಕಚೇರಿ ನನಗೆ ದೇವಸ್ಥಾನ ಇದ್ದಹಾಗೆ, ಆದ್ದರಿಂದ ಮಂತ್ರಿಯಾಗಿ ನಾನು ಹೋಗುವ ಜಿಲ್ಲೆಯ, ತಾಲೂಕಿನ ಕಾಂಗ್ರೆಸ್ ಕಚೇರಿಗೆ ಕಡ್ಡಾಯವಾಗಿ ಭೇಟಿ ಕೊಡುವ ಪರಿಪಾಠವನ್ನು ಪಾಲಿಸುತ್ತಿದ್ದೇನೆ. ಕಾರ್ಯಕರ್ತರು ಯಾವ ಸಂದರ್ಭದಲ್ಲೂ ನನ್ನನ್ನು ಆಹ್ವಾನಿಸಿದರೂ ಯಾವುದೇ ಹಮ್ಮು, ಬಿಮ್ಮುಗಳಿಲ್ಲದೆ ಬರುತ್ತೇನೆ. ಭ್ರಮೆಗಿಂತ ಹೆಚ್ಚಾಗಿ ನಾನು ವಾಸ್ತವದಲ್ಲಿ ಬದುಕುವವನು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.
 ಅವರು ಉಡುಪಿ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು, ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸಂಸದರನ್ನು ಆರಿಸಿಬೇಕು, ಅದಕ್ಕಾಗಿ ಪಕ್ಷಕ್ಕೆ ಬಲ ತುಂಬುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ತಿಳಿಸಿದರು.
ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಜನರ ಜೀವನಮಟ್ಟವನ್ನು ಸುಧಾರಿಸುವುದು ರಾಜ್ಯ ಸರ್ಕಾರದ ಬದ್ಧತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆ, ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ ಯೋಜನೆಯಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಇಂತಹ ಜನಪರ ಕಾರ್ಯಕ್ರಮಗಳನ್ನು ಇನ್ನಷ್ಟು ತೀವ್ರ ರೀತಿಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ದಿವಾಕರ ಕುಂದರ್ ಅವರು ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಪಕ್ಷದ ಪ್ರಮುಖರಾದ ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ಕೇಶವ ಎಂ. ಕೋಟ್ಯಾನ್, ರಮೇಶ್ ಕಾಂಚನ್, ಅಮೃತ್ ಶೆಣೈ, ಶಶಿರಾಜ್ ಕುಂದರ್, ಯತೀಶ್ ಕರ್ಕೇರಾ, ಸಾಯಿರಾಜ್, ಸುರೇಶ್ ಶೆಟ್ಟಿ ಬನ್ನಂಜೆ, ಗಿರೀಶ್ ಕುಮಾರ್, ಲಕ್ಷ್ಮಣ ಅಂಬಲಪಾಡಿ, ಸದಾಶಿವ ಕಟ್ಟೆಗುಡ್ಡೆ, ಪ್ರಕಾಶ್ ಉದ್ಯಾವರ, ನಟರಾಜ ಪ್ರಭು, ಜಿತೇಶ್ ಕುಮಾರ್, ಹನೀಫ್ ಶೇಖ್ ಇದ್ದರು.
ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ, ಹರೀಶ್ ಕಿಣಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.