ಉಡುಪಿ

ರಕ್ತದಾನ ಶಿಬಿರ

Published On :

ಕೋಟ: ಡಾ.ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ಸಂಘ, ಮಹಿಳಾ ಘಟಕದ ಆಶ್ರಯದಲ್ಲಿ ಇಲ್ಲಿನ ಲಕ್ಷ್ಮೀ ಸೋಮ ಬಂಗೇರ ಕಾಲೇಜಿನಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಡಾ.ಜಿ. ಶಂಕರ್ ಉದ್ಘಾಟಿಸಿ, ರಕ್ತದಾನ ಶಿಬಿರಕ್ಕೆ ಸ್ಥಳೀಯರ ಸಹಕಾರ ಅತ್ಯಗತ್ಯ ಎಂದರು. ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ್ ಸಿ. ಕುಂದರ್, ಮೊಗವೀರ ಯುವ ಸಂಘದ ಅಧ್ಯಕ್ಷ ಸುರೇಶ್ ಕೆ., ಮಣಿಪಾಲ ರಕ್ತನಿಧಿಯ ಡಾ. ಸುಧಾ ಭಟ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಎಮ್.ಎಸ್. ಸಂಜೀವ, ಕಾಲೇಜಿನ ಪ್ರಾಂಶುಪಾಲ ಕೆ. ವಂಸತರಾಜ್ ಶೆಟ್ಟಿ, ಪ್ರಾಧ್ಯಾಪಕರಾದ ಡಾ. ರಾಜೇಂದ್ರ ಎಸ್. ನಾಯಕ್, ರವಿಪ್ರಸಾದ್ ಕೆ.ಜಿ., ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಂಚನ್, ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ಗೋಪಾಲ, ನಿಕಟಪೂರ್ವ ಅಧ್ಯಕ್ಷ ಶಿವರಾಮ್ ಕೆ.ಎಂ., ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಎಚ್. ಕುಂದರ್ ಇದ್ದರು.

ಕೊಠಡಿ ಉದ್ಘಾಟನೆ

ಕೋಟ: ಇಲ್ಲಿನ ಗೀತಾನಂದ ಪೌಂಡೇಶನ್ ವತಿಯಿಂದ ರು. 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲ್ಪಟ್ಟ ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ನೂತನ ಕೊಠಡಿಯನ್ನು ಶನಿವಾರ ಪೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಿದರು. ವೇದಮೂರ್ತಿ ಮಧುಸೂದನ ಬಾಯರಿ ನೇತೃತ್ವದಲ್ಲಿ ಹೋಮ ಹವನ ನೆರವೆರಿಸಲಾಯಿತು.  ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಸುನೀತಾ ರಾಜಾರಾಮ್, ಗ್ರಾಪಂ ಅಧ್ಯಕ್ಷ ಎಂ. ಶಿವ ಪೂಜಾರಿ, ಸದಸ್ಯರಾದ ಜೈರಾಮ್ ಶೆಟ್ಟಿ, ಭುಜಂಗ ಗುರಿಕಾರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಸದಸ್ಯರಾದ ಸುಹಾಸಿನಿ, ಚಂದ್ರ, ವಾಹಿನಿ ಯುವಕ ಮಂಡಲದ ಅಧ್ಯಕ್ಷ ಎಚ್. ರಮೇಶ್ ಕುಂದರ್, ಕಾಲೇಜಿನ ಪ್ರಾಂಶುಪಾಲ ಕೆ. ವಸಂತರಾಜಾ ಶೆಟ್ಟಿ, ಸರ್ಕಾರಿ ಸಂಯುಕ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್ ಹೆಬ್ಬಾರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ವಿಷ್ಣುಮೂರ್ತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.