ಉಡುಪಿ

ಕುರಾನ್ ಹಂಚಿಕೆ: ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ರಕ್ಷಣೆ ಒದಗಿಸಿ- ಮನವಿ

Published On :

ಉಡುಪಿ: ಬಕ್ರೀದ್ ಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಉಡುಪಿ ಜಿಲ್ಲೆಯ ಮುಸ್ಲಿಮರು ಕುರಾನ್‌ನನ್ನು ನೀಡುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಬೋರಲಿಂಗಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಜಾನುವಾರುಗಳ ಸಾಗಾಣಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಹೊರತು ಇತರರು ಯಾರು ಕೂಡ ಹಸ್ತಕ್ಷೇಪ ನಡೆಸಬಾರದು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು.
ಯಾವುದೇ ಕಾರಣಕ್ಕೂ ಮೂರು ದಿನಗಳ ಅವಧಿಯಲ್ಲಿ ಪೊಲೀಸರು ವಿನಾಃ ಕಾರಣ ಮನೆಮನೆಗಳಿಗೆ ದಾಳಿ ನಡೆಸುವುದನ್ನು ತಡೆಯಬೇಕು ಹಾಗೂ ಸಾಕಿದ ಜಾನುವಾರುಗಳನ್ನು ಜಪ್ತಿ ಮಾಡುವುದನ್ನು ತಡೆಯಬೇಕು ಎಂದು ಒಕ್ಕೂಟ ಮನವಿಯಲ್ಲಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಎಂ.ಪಿ. ಮೊಯ್ದಿನಬ್ಬ, ಹಾಜಿ ಅಬ್ದುಲ್ಲ ಪರ್ಕಳ, ಅಬ್ದುಲ್ ರಶೀದ್ ಜತೀಬ್, ಹುಸೇನ್ ಕೊಡಿಬೆಂಗ್ರೆ, ಮುನಾಫ್ ಕಂಡ್ಲೂರು ಇದ್ದರು.
16ರಂದು ಈದುಲ್ ಅಝ್ಹಾ: ದುಲ್‌ಹಜ್ ತಿಂಗಳ ಚಂದ್ರದರ್ಶನವು ಭಾನುವಾರ ಅಸ್ತಮಿಸಿದ ಸೋಮವಾರ ರಾತ್ರಿ ಆಗಿರುವುದರಿಂದ ಬಕ್ರೀದ್ ಹಬ್ಬ (ಈದುಲ್ ಅಝ್ಹಾ)ವನ್ನು 16ರಂದು ಬುಧವಾರ ಆಚರಿಸಲು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಅಲ್‌ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ತೀರ್ಮಾನಿಸಿರುವುದಾಗಿ ಸಂಯುಕ್ತ ಜಮಾಅತಿನ ಪ್ರಧಾನ ಕಾರ್ಯದರ್ಶಿ ಎಂ.ಎ. ಬಾವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.