ದೇಶದ ಹಿತದೃಷ್ಟಿಯಿಂದ ಮೋದಿ ಪ್ರಧಾನಿ ಆಗಲೇಬೇಕು: ಕೋಟ
ಗಂಗೊಳ್ಳಿ: ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಘೋಷಣೆ ಮಾಡಿರುವುದು ಪಕ್ಷದ ಬಹುದೊಡ್ಡ ಸಾಧನೆಯಾಗಿದೆ. ಮೋದಿ ಪ್ರಧಾನಿಯಾಗಬೇಕೆನ್ನುವುದು ಕೇವಲ ಬಿಜೆಪಿ ಕಾರ್ಯಕರ್ತರ ಅಭಿಲಾಷೆಯಲ್ಲ, ಬದಲಾಗಿ ದೇಶದ ಭವಿಷ್ಯದ ಹಿತದೃಷ್ಟಿಯಿಂದ ಅವರು ಪ್ರಧಾನಿಯಾಗಲೇಬೇಕು ಎನ್ನುವುದು ಸಾಮಾನ್ಯ ಜನರ ಬಯಕೆಯಾಗಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ಬೈಂದೂರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬಳಿಯ ದ್ವಾರಕಾ ಕಟ್ಟಡದ ಮೊದಲನೇ ಮಹಡಿಯಲ್ಲಿ ಬೈಂದೂರು ಕ್ಷೇತ್ರ ಬಿಜೆಪಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಸಂಘಟನೆಯ ವಾತಾವರಣ ಉತ್ತಮವಾಗಿದೆ. ಇಲ್ಲಿನ ಪಕ್ಷದ ಕಚೇರಿಯು ನಾಯಕರು ಮತ್ತು ಕಾರ್ಯಕರ್ತರ ನಡುವಿನ ಸಂಪರ್ಕ ಕೊಂಡಿಯಾಗಬೇಕಾಗಿದೆ ಎಂದ ಅವರು, ಮುಂದಿನ ದಿನದಲ್ಲಿ ಪಕ್ಷದ ಸೈದ್ಧಾಂತಿಕ ತತ್ವ ಒಪ್ಪಿಕೊಂಡಿರುವ ತಳಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವುದರ ಮೂಲಕ ಅವರಿಗೆ ನ್ಯಾಯ ಒದಗಿಸಬೇಕು ಎಂದರು.
ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ. ಸುಕುಮಾರ್ ಶೆಟ್ಟಿ ನೂತನ ಕಚೇರಿಯನ್ನು ಉದ್ಘಾಟಿಸಿದರು. ಜಿ.ಪಂ. ಸದಸ್ಯ ಬಾಬು ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಸುರೇಶ್ ಶೆಟ್ಟಿ ಮಾತನಾಡಿದರು.
ಇದೇ ಸಂದರ್ಭ ವಿವಿಧ ಮೋರ್ಚಾಗಳ ನೂತನ ಅಧ್ಯಕ್ಷರನ್ನು ಪಕ್ಷದ ಶಾಲು ಹೊದಿಸಿ ಗೌರವಿಸಲಾಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರುರಾಜ್ ಶೆಟ್ಟಿ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾಶಿವ ಡಿ. ಪಡುವರಿ, ಸದಾನಂದ ಶೇರುಗಾರ್, ವೆಂಕಟು ಶೇರುಗಾರ್, ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

