ಮಲ್ಯರ ಮಠದಲ್ಲಿ ಜ್ಞಾನಗಂಗಾ ಕಾರ್ಯಕ್ರಮ
ಗಂಗೊಳ್ಳಿ; ಭಗವಂತನಲ್ಲಿ ಶ್ರದ್ಧೆಯಿಟ್ಟು, ನಿಸ್ವಾರ್ಥವಾಗಿ ಮಾಡಿದ ಎಲ್ಲ ಕಾರ್ಯಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಗೌಡ ಸಾರಸ್ವರ ಬ್ರಾಹ್ಮಣ ಸಮಾಜವು ಎಲ್ಲ ಸಮಾಜವನ್ನು ಗೌರವಿಸುತ್ತಾ ಜೀವನ ನಡೆಸುತ್ತಿದೆ. ನಮ್ಮ ಸಮಾಜದ ಮುಂದೆ ಕಠಿಣ ಸವಾಲುಗಳು ಹಾಗೂ ಅನೇಕ ಸಮಸ್ಯೆಗಳು ನಮ್ಮ ಮುಂದಿದ್ದು, ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಲು ಹಾಗೂ ಪರಿಹರಿಸಲು ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಮಾತ್ರ ಸಾಧ್ಯವಿದೆ ಎಂದು ಉಡುಪಿ ಜಿಲ್ಲೆಯ ಜಿಎಸ್ಬಿ ಹಿತರಕ್ಷಣಾ ವೇದಿಕೆ ಸಂಚಾಲಕ ಆರ್. ವಿವೇಕಾನಂದ ಶೆಣೈ ಹೇಳಿದರು.
ಗಂಗೊಳ್ಳಿಯ ನಿನಾದ ಸಂಸ್ಥೆಯ ಆಶ್ರಯದಲ್ಲಿ ಸ್ಥಳೀಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಜ್ಞಾನಗಂಗಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಉಡುಪಿ ಜಿಲ್ಲೆಯ ಜಿಎಸ್ಬಿ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್. ವಿವೇಕಾನಂದ ಶೆಣೈ ಅವರನ್ನು ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ ಸನ್ಮಾನಿಸಿ ಗೌರವಿಸಿದರು. ಜ್ಞಾನಗಂಗಾ ಕಾರ್ಯಕ್ರಮದ ಅಧ್ಯಕ್ಷ ಕೆ. ಕೃಷ್ಣ ಭಟ್, ಉಪಾಧ್ಯಕ್ಷ ಶಾಂತಾರಾಮ ಭಟ್, ಕಾರ್ಯದರ್ಶಿ ಗಣೇಶ ನಾಯಕ್, ನಿನಾದ ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ, ಸುದರ್ಶನ ವಿ. ಆಚಾರ್ಯ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

