ಉಡುಪಿ

ಬೆಳ್ತಂಗಡಿ ಪೇಟೆ ಸಮೀಪ ಅಪಘಾತ: ಮಗು ಸಹಿತ ನಾಲ್ವರ ಸಾವು

Published On :

ಬೆಳ್ತಂಗಡಿ: ಗೂಡ್ಸ್ ಆಟೋ ಮತ್ತು ಮಿನಿಬಸ್ ಮುಖಾಮುಖಿ ಡಿಕ್ಕಿಯಾಗಿ ಒಂದು ಮಗು ಸಹಿತ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಬೆಳ್ತಂಗಡಿ ಪೇಟೆ ಸನಿಹ ನಡೆದಿದೆ. ಘಟನೆಯಲ್ಲಿ 5 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ತಾಲೂಕಿನ ಮುಂಡೂರು ನಿವಾಸಿಗಳಾದ ಹಸೈನಾರ್(37), ಇವರ ಸಹೋದರಿ ಜೈನಾಬಿ(25) ಇಸುಬು ಎಂಬವರ ಪುತ್ರ ನಾಸೀರ್ (13) ಜೋಹರಾ ಅವರ ಪುತ್ರ ಮಹಮದ್ ಇರ್ಫಾನ್(2) ಮೃತರುಪಟ್ಟವರು. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋದಲ್ಲಿದ್ದವರು ಬೆಳಾಲು ಗ್ರಾಮದ ಮಂಜನೊಟ್ಟು ದರ್ಗಾ ಶರೀಫ್‌ನಲ್ಲಿ ಕಾರ್ಯಕ್ರಮ ಮುಗಿಸಿ ಬರುತ್ತಿದ್ದರು. ಲಾಯಿಲ ಸೇತುವೆ ಸನಿಹ ಬರುತ್ತಿದ್ದಾಗ ಲಾರಿಯೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಆಟೋ ಡಿಕ್ಕಿ ಹೊಡೆಯಿತು. ಟೆಂಪೋದಲ್ಲಿದ್ದ ಪ್ರಯಾಣಿಕರು ಚಿಕ್ಕಮಗಳೂರಿನವರಾಗಿದ್ದು ಅವರು ಉಡುಪಿ, ಕೊಲ್ಲೂರು, ಕಟೀಲು ಕ್ಷೇತ್ರಗಳನ್ನು ಸಂದರ್ಶಿಸಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು.
ಟೆಂಪೋ ಚಾಲಕನ ಆ ಕ್ಷಣದ ಚಾಣಾಕ್ಷತೆ ಮತ್ತು ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ್ದರಿಂದ ಟೆಂಪೊದಲ್ಲಿದ್ದ ಪ್ರಯಾಣಿಕರ ಜೀವಕ್ಕೆ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಚಾಲಕ ಚೇತನ್ ಸಣ್ಣಪುಟ್ಟ ಗಾಯಗೊಂಡಿದ್ದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ರಿಕ್ಷಾದಲ್ಲಿದ್ದ ಹಸೈನಾರ್ ಮತ್ತು ಮಹಮ್ಮದ್ ಸ್ಥಳದಲ್ಲೇ ಮೃತಪಟ್ಟರೆ ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು.
ಎರಡೂ ವಾಹನಗಳು ನುಜ್ಜುಗುಜ್ಜಾಗಿವೆ. ಘಟನೆಯಿಂದ ಸುಮಾರು ಒಂದೂವರೆ ಗಂಟೆಗಳ ಕಾಲ ಬೆಳ್ತಂಗಡಿ-ಉಜಿರೆ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.