ಉಡುಪಿ

ನಾಗರ ಬನದ ಪಕ್ಕ ದನದ ಮಾಂಸ: ಪ್ರಕ್ಷುಬ್ಧ

Published On :

ಕನ್ನಡಪ್ರಭ ವಾರ್ತೆ, ಭಟ್ಕಳ, ಅ.20
ಇಲ್ಲಿನ ಹಳೆ ಬಸ್‌ಸ್ಟ್ಯಾಂಡ್ ಬಳಿ ಇರುವ ನಾಗರ ಬನದ ಪಕ್ಕದಲ್ಲಿ ದುಷ್ಕರ್ಮಿಗಳು ಶನಿವಾರ ತಡರಾತ್ರಿ ದನದ ಮಾಂಸದ ತುಂಡುಗಳನ್ನು ಎಸೆದು ಹೋಗಿದ್ದರಿಂದ ಭಾನುವಾರ ಬೆಳಗ್ಗೆಯಿಂದಲೇ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಬೆಳಗ್ಗೆ ಬನಕ್ಕೆ ಹೋದ ಸಾರ್ವಜನಿಕರು ಮಾಂಸದ ತುಂಡು ಬಿದ್ದಿರುವ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ನೂರಾರು ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಪ್ರಕ್ಷುಬ್ಧ ವಾತಾವರಣ ಉಂಟಾಯಿತು. ವಿಷಯ ತಿಳಿದ ಪೊಲೀಸರು ಕೂಡಲೇ ಮಾಂಸದ ತುಂಡುಗಳನ್ನು ತೆರವುಗೊಳಿಸಿ ಸಾರ್ವಜನಿಕರನ್ನು ಚದುರಿಸಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಗರಬನದ ಸುತ್ತು ಬಿಗು ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ನಗರ ಠಾಣೆಗೆ ಭೇಟಿ ನೀಡಿ ದೇವಸ್ಥಾನದ ಪಾವಿತ್ರ್ಯತೆಯನ್ನು ಹಾಳುಮಾಡಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಕ್ರಮ ಮರಳು ಸಾಗಾಣಿಕೆ: ನಾಲ್ಕು ಲಾರಿಗಳ ವಶ
ಚಿಕ್ಕಬಳ್ಳಾಪುರ: ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ 4 ಲಾರಿಗಳನ್ನು ಅಪರಾಧ ನಿಯಂತ್ರಣ ವಿಭಾಗದ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನ ನಂದಿ ಕ್ರಾಸ್ ಸಮೀಪ ಬೆಂಗಳೂರಿನ ಕಡೆಗೆ ಅಕ್ರಮವಾಗಿ ಮರಳನ್ನು ಸಾಗಾಣಿಕೆ ಮಾಡಲಾಗುತ್ತಿತ್ತು. ಇದನ್ನು ಪತ್ತೆ ಹಚ್ಚಿದ ಪೊಲೀಸರು ಪರಿಶೀಲನೆ ನಡೆಸಿ ನಾಲ್ಕು ಲಾರಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.