ಉಡುಪಿ

ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published On :

ಮಂಗಳೂರು: ಮಣಿಪಾಲ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ಕಾಪು, ಮುಳೂರು, ಉಚ್ಚಿಲ, ಶಿರ್ವ, ಬಂಟಕಲ್ಲು, ಶಂಕರಪುರ, ಮಜೂರು, ಬೆಳಪು, ಕಳತ್ತೂರು, ಮಲ್ಲಾರು, ಪಾಂಗಳ, ಇನ್ನಂಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸೌಜನ್ಯ ಹತ್ಯಾಚಾರ ಪ್ರಕರಣ ಸಿಬಿಐಗೆ ಒಪ್ಪಿಸಲು ಆಗ್ರಹ: ಡಿವೈಎಫ್ಐ ಪ್ರತಿಭಟನೆ
ಕುಂದಾಪುರ: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಡಿವೈಎಫ್ಐ ಕುಂದಾಪುರ ತಾಲೂಕು ಸಮಿತಿ ವತಿಯಿಂದ ಸೋಮವಾರ ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಸೌಜನ್ಯ ಕೊಲೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಅಧಿಕಾರಕ್ಕಾಗಿ ನ್ಯಾಯ ಕಡೆಗಣಿಸುತ್ತಿರುವ ರಾಜಕಾರಣಿಗಳನ್ನು ಜನತೆ ದೂರವಿಡಬೇಕು, ಶ್ರೀ ಕ್ಷೇತ್ರ ವಿರುದ್ಧ ಅಪಪ್ರಚಾರ ನಡೆಸಿ ಮುಗ್ಧ ಜನತೆಯನ್ನು ದಾರಿ ತಪ್ಪಿಸುವ ಕುತಂತ್ರ ನಿಲ್ಲಿಸಬೇಕು. ನ್ಯಾಯದ ಪರವಾಗಿ ಹೋರಾಟ ಮಾಡುತ್ತಿರುವವರಿಗೆ ಬೆದರಿಕೆ ಒಡ್ಡುವುದು ನಿಲ್ಲಬೇಕು. ಅಲ್ಲದೆ ಸೌಜನ್ಯ ಕುಟುಂಬಕ್ಕೆ ಗರಿಷ್ಠ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಸಂಚಾಲಕರಾದ ರಾಜೇಶ್ ವಡೇರ ಹೋಬಳಿ, ಸಹ ಸಂಚಾಲಕ ಸುರೇಶ್ ಕಲ್ಲಾಗರ, ಡಿವೈಎಫ್ಐ ಮಾಜಿ ಅಧ್ಯಕ್ಷ ಎಚ್. ನರಸಿಂಹ ಮಾತನಾಡಿದರು. ಪ್ರಭಾಕರ್ ನೇರಳಕಟ್ಟೆ, ಗಣೇಶ್ ಕಲ್ಲಾಗರ, ರಾಜಾ ಬಿ.ಟಿ.ಆರ್., ಶೇಖರ ದೋಣಿಮನೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ ಹೆಮ್ಮಾಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.