ಉಡುಪಿ

ಮಡಿವಾಳ ಸಂಘದ ವೆಬ್ಸೈಟ್ ಅನಾವರಣ

Published On :


ಉಡುಪಿ: ರಜಕ ಯಾನೆ ಮಡಿವಾಳ ಸಂಘದ ವೆಬ್ಸೈಟ್ ಉದ್ಘಾಟನೆ ಮತ್ತು ವಾರ್ಷಿಕ ಮಹಾಸಭೆಯು ಇಲ್ಲಿನ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಗುರುಮಾಚಿದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಆನಂದ ಮಡಿವಾಳ ಮಾತನಾಡಿ ರಾಜ್ಯದಲ್ಲಿ ಸುಮಾರು 45 ಲಕ್ಷಕ್ಕೂ ಅಧಿಕ ಜನರು ಮಡಿವಾಳ ಸಮುದಾಯದಲ್ಲಿದ್ದಾರೆ. ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯಗಳು ಸಿಕ್ಕಿಲ್ಲ. ಬಹುಶಃ ಮಡಿವಾಳ ಸಮುದಾಯದಲ್ಲಿ ಒಗ್ಗಟ್ಟು ಇಲ್ಲದಿರುವುದು ಕೂಡ ಇದಕ್ಕೆ ಕಾರಣ ಎಂದು ತಿಳಿಸಿ ರಜಕ ಭವನದ ನಿರ್ಮಾಣಕ್ಕೆ ಶಾಸಕರು ಸಹಕರಿಸುವಂತೆ ಮನವಿ ಸಲ್ಲಿಸಿದರು.
ವೆಬ್ಸೈಟ್ ಉದ್ಘಾಟಿಸಿ ಮಾತನಾಡಿದ ಶಾಸಕ ಪ್ರಮೋದ್ ಮಧ್ವರಾಜ್, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅಗತ್ಯವಿರುವ ಸೌಲಭ್ಯವನ್ನು ಒದಗಿಸುವುದಾಗಿ ಭರವಸೆ ನೀಡಿದ ಅವರು ಸಮುದಾಯಗಳಲ್ಲಿ ಶಕ್ತಿ ಹಾಗೂ ಒಗ್ಗಟ್ಟು ಇದ್ದರೆ ಪ್ರತಿಯೊಂದು ಕೆಲಸಗಳಲ್ಲೂ ಯಶಸ್ಸು ಸಿಗುತ್ತದೆ ಎಂದರು.
ಅಧ್ಯಕ್ಷತೆಯನ್ನು ರಜಕ ಯಾನೆ ಮಡಿವಾಳರ ಸಂಘದ ಅಧ್ಯಕ್ಷ ಕೆ. ರಾಜು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರಸಭಾ ಸದಸ್ಯ ಶಶಿರಾಜ್ ಕುಂದರ್, ಹೆಬ್ರಿ ತಿಮ್ಮ ಸೋಮಯ್ಯ ಮಡಿವಾಳ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಾಣೂರು ಸತೀಶ್ ಸಾಲಿಯಾನ್, ಯುವ ಸಂಘಟನೆ ಅಧ್ಯಕ್ಷ ಪ್ರದೀಪ್ ಮಡಿವಾಳ ಇದ್ದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಪಿ. ಮಂಚಿ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶ್ಯಾಮಲಾ ಕುಂದರ್ ನಿರೂಪಿಸಿದರು. ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.