ಉಡುಪಿ

ಸೌಜನ್ಯ ಹತ್ಯಾಚಾರ ಪ್ರಕರಣ ಸಿಬಿಐಗೆ ಒಪ್ಪಿಸಲು ಆಗ್ರಹ: ಸಿಪಿಎಂ ಪ್ರತಿಭಟನೆ

Published On :

ಉಡುಪಿ: ಬೆಳ್ತಂಗಡಿಯ ಸೌಜನ್ಯ ಹತ್ಯಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವರೆಗೂ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಭಾರತ್ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ದ ಉಡುಪಿ ಜಿಲ್ಲಾ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಬುಧವಾರ ನಗರದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ಸಿಪಿಎಂ ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ನಾಯಕ ಸುರೇಶ್ ಕಲ್ಲಂಗಳ, ಸೌಜನ್ಯ ಪ್ರಕರಣವನ್ನು ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್, ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಬಗ್ಗೆ ಅವು ಒತ್ತಾಯಿಸುತ್ತಿಲ್ಲ. ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
ಇನ್ನೊಬ್ಬ ನಾಯಕ ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಮತ್ತು ಸುತ್ತಮುತ್ತ ಕಳೆದ 11 ವರ್ಷಗಳಿಂದ 450ಕ್ಕೂ ಹೆಚ್ಚು ಕೊಲೆ, ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಕಳೆದ ವರ್ಷ ನಡದ ಸೌಜನ್ಯ ಕೊಲೆಯಾಗಲಿ, ಅದಕ್ಕೆ 20 ದಿನ ಮೊದಲು ನಡೆದ ಜೋಡಿ ಕೊಲೆಯಲ್ಲಾಗಲಿ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇದು ಪೊಲೀಸ್  ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ನಾಯಕರಾದ ಕೆ. ಶಂಕರ್, ದೋಗು ಸುವರ್ಣ, ಎಚ್. ನರಸಿಂಹ, ಉಮೇಶ್ ಕುಂದರ್, ಗಾಡ್ವೀನ್, ಶಶಿಧರ ಗೊಲ್ಲ, ಕವಿರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.