ಉಡುಪಿ

27ರಂದು ಹೆಬ್ರಿಗೆ ಕೇಂದ್ರ ಸಚಿವ ಮೊಯ್ಲಿ

Published On :

ಹೆಬ್ರಿ: ಹೆಬ್ರಿಯ ಶೀಲಾ ಸುಭೋದ್ ಬಲ್ಲಾಳ್ ಬಂಟರ ಭವನದಲ್ಲಿ ಅ.27ರಂದು ಸಂಜೆ 3 ಗಂಟೆಗೆ ನಡೆಯುವ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು, ಪಕ್ಷದ ವಿವಿಧ ಘಟಕಗಳ ಪ್ರಮುಖರ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ ಭಾಗವಹಿಸಲಿದ್ದಾರೆ. ರಾಜ್ಯ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ, ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಕೆಪಿಸಿಸಿ ಸದಸ್ಯ ಹೆಬ್ರಿ ಗೋಪಾಲ ಭಂಡಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಚ್. ಪ್ರಸನ್ನ ಬಲ್ಲಾಳ್,ಪಕ್ಷದ ವಿವಿಧ ಘಟಕಗಳ ಪ್ರಮುಖರು, ಮುಖಂಡರು ಭಾಗವಹಿಸಲಿದ್ದಾರೆ.
27ರಂದು ಹಕ್ಕೊತ್ತಾಯ
ಉಡುಪಿ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿ, ಧರ್ಮಸ್ಥಳ ಮತ್ತು ಉಜಿರೆ ಗ್ರಾಮಗಳಲ್ಲಿ 1986ರಿಂದ 2012ರವರೆಗಿನ ಅವಧಿಯಲ್ಲಿ ನಡೆದ ಸಾವಿರಕ್ಕೂ ಅಧಿಕ ಅಸಹಜ ಮರಣ, ಆತ್ಮಹತ್ಯೆ, ಅತ್ಯಾಚಾರ, ಕೊಲೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆಯು 27ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಪ್ರತಿಮೆಯ ಬಳಿ ಹಕ್ಕೊತ್ತಾಯ ಪ್ರತಿಭಟನೆ ಹಮ್ಮಿಕೊಂಡಿದೆ. ಕಳೆದ ವರ್ಷ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳನ್ನು ಅಪಹರಿಸಿ, ಅತ್ಯಾಚಾರವೆಸಗಿ ಅಮಾನವೀಯವಾಗಿ ಕೊಲೆ ಮಾಡಲಾಯಿತು. ಇಂತಹ ಅನೇಕ ಪ್ರಕರಣಗಳು ನಡೆದಿದ್ದು, ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ತನಿಖೆ ಎಂಬ ನಾಟಕ ನಡೆಸಿ ಪ್ರಕರಣಗಳನ್ನು ಮುಚ್ಚಿ ಹಾಕಿ ಆರೋಪಿಗಳನ್ನು ರಕ್ಷಿಸಿದ್ದಾರೆ. ಆದ್ದರಿಂದ ಈ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸುವಂತೆ ನಿರಂತರ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.