ಉಡುಪಿ

ಉಡುಪಿ: ರಕ್ತದಾನ ಶಿಬಿರ

Published On :

ಉಡುಪಿ: ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಉಡುಪಿ ಹಾಗೂ ಬಿಲ್ಲವ ಯುವ ವೇದಿಕೆ ಅಲೆವೂರು ಘಟಕದ ವತಿಯಿಂದ ರಕ್ತದಾನ ಶಿಬಿರವನ್ನು ಇಲ್ಲಿನ ನೆಹರು ನಗರ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಲಯನ್ಸ್ ಜಿಲ್ಲಾ ರಾಜ್ಯಪಾಲ ಎಚ್.ಎನ್. ಶಿವಕುಮಾರ್ ಅವರು ಒಂದು ಯುನಿಟ್ ರಕ್ತದಾನದಿಂದ ನಾಲ್ಕು ಜೀವವನ್ನು ಉಳಿಸಬಹುದು. ರಕ್ತದಾನ ಮಹತ್ವವನ್ನು ಎಲ್ಲರೂ ಅರಿತು ಜೀವ ಉಳಿಸುವಂತ ಮಹತ್ತರ ಕಾರ್ಯದಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದರು. ಅಧ್ಯಕ್ಷತೆಯನ್ನು ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕಿಣಿ ವಹಿಸಿದ್ದರು. ನಿರ್ಮಲಾ ಶಿವಕುಮಾರ್, ಕುಕ್ಕಿಕಟ್ಟೆಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ವಾಸುದೇವಾ ಅಮೀನ್, ಬಿಲ್ಲವ ಯುವ ವೇದಿಕೆ ಜಿಲ್ಲಾಧ್ಯಕ್ಷ ಡಾ. ಸತೀಶ್ ಕಿಣಿ, ರಂಜನ್ ಶ್ರೀಧರ್ ಶೆಟ್ಟಿ, ಡಾ.ಕೆ.ಕೆ. ಕಲ್ಕೂರು, ಇಂದೂ ರಮಾನಂದ ಭಟ್, ಅಲೆವೂರು ಗಣಪತಿ ಕಿಣಿ, ಕಾರ್ಯದರ್ಶಿ ಹರಿಪ್ರಸಾದ್ ರೈ, ಮಧುಸೂದನ್ ಹೇರೂರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.