ಯುವತಿ ನಾಪತ್ತೆ; ದೂರು ದಾಖಲು
ಕಾಪು: ಇಲ್ಲಿನ ಪಡುಗ್ರಾಮದಲ್ಲಿನ ಯುವತಿಯೊಬ್ಬಳು ನಾಪತ್ತೆಯಾದ ಪ್ರಕರಣ ಮಂಗಳವಾರ ವರದಿಯಾಗಿದೆ. ಕಾಣೆಯಾದವರು ಸುಪ್ರಿಯ (20). ಇವರು ಕಲ್ಲಮುಂಡ್ಕೂರಿನಲ್ಲಿರುವ ತಮ್ಮ ಅಜ್ಜಿ ಮನೆಗೆ ಹೋಗಿ ಬರುವುದಾಗಿ ತಿಳಿಸಿದ್ದು ಇದುವರೆಗೆ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ವ್ಯಕ್ತಿ ನಾಪತ್ತೆ
ಕಾಪು; ಇಲ್ಲಿನ ಮಜೂರು ಸರ್ಕಲ್ ಬಳಿಯ ನಿವಾಸಿ ಯೋಗೀಶ್ (29) ಎಂಬವರು ಯಾವುದೋ ಕಾರ್ಯ ನಿಮಿತ್ತ ಮಜೂರಿನಿಂದ ಹೋದವರು ಈವರೆಗೆ ಮನೆಗೆ ಬಾರದೇ ಕಾಣೆಯಾಗಿರುವ ಪ್ರಕರಣ ಬುಧವಾರ ವರದಿಯಾಗಿದೆ. ಈ ಬಗ್ಗೆ ಸತೀಶ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆಯತಪ್ಪಿ ಬಿದ್ದು ಸಾವು
ಹಿರಿಯಡ್ಕ: ಆಯ ತಪ್ಪಿ ಸಿಮೆಂಟ್ ನೆಲಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಕಣಜಾರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪ್ರಭಾಕರ ನಾಯಕ್ (59) ಮೃತರು. ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಇವರು ಮಂಗಳವಾರ ಮದ್ಯಪಾನ ಮಾಡಿ ಮನೆಗೆ ಬಂದಿದ್ದು, ಆಯತಪ್ಪಿ ನೆಲಕ್ಕೆ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪತ್ನಿ ನಳಿನಿ ನೀಡಿದ ದೂರಿನಂತೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಟ್ಕಾ; ವ್ಯಕ್ತಿ ಸರೆ
ಬ್ರಹ್ಮಾವರ: ಇಲ್ಲಿನ ಕಚ್ಚೂರು ಗ್ರಾಮದ ಬಾರ್ಕೂರು ಎಸ್.ಎನ್. ಹೆಮ್ಮಾಡಿ ಅವರ ಕಟ್ಟಡದ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಸಂದರ ಪೂಜಾರಿ ಮತ್ತು ಚಂದ್ರಶೇಖರ ಎಂಬವರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಸುಂದರ ಪೂಜಾರಿ ತಪ್ದಿಪಿಸಿಕೊಂಡಿದ್ದು, ಚಂದ್ರಶೇಖರನನ್ನು ಬಂಧಿಸಿದ್ದಾರೆ. ಆಟಕ್ಕೆ ಬಳಸಿದ 2,560 ನಗದು ಹಾಗೂ ಇನ್ನಿತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

