ಶೇ.70 ಮಂದಿಗೆ ಬಿಪಿಎಲ್ ಕಾರ್ಡ್
ಉಡುಪಿ: ಜಿಲ್ಲೆಯಲ್ಲಿ 8 ವರ್ಷಗಳಿಂದ ಬಿಪಿಎಲ್ ಕಾರ್ಡ್ಗಳನ್ನು ನೀಡಲಾಗಿರಲಿಲ್ಲ. ಪ್ರಸ್ತುತ ರು. 450 ಪರಿಮಿತಿಯೊಳಗೆ ಗೃಹಬಳಕೆಯ ವಿದ್ಯುತ್ ಬಿಲ್ ಪಾವತಿಸುವ ಕುಟುಂಬಕ್ಕೆ ಬಿಪಿಎಲ್ ಕಾರ್ಡ್ ಸೌಲಭ್ಯ ಒದಗಿಸಲಾಗುತ್ತಿದೆ. ಜಿಲ್ಲೆಯ ಶೇ.70 ಕುಟುಂಬಕ್ಕೆ ಬಿಪಿಎಲ್ ಸೌಲಭ್ಯ ದೊರಕುವಂತಾಗಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಭ್ರಷ್ಟಾಚಾರ ವಿರುದ್ಧ ಹೋರಾಟದಿಂದಾಗಿ ನಗರಸಭೆ ಹಾಗೂ ತಾಲೂಕು ಕಚೇರಿಗಳಲ್ಲಿ ಅಭಿಯಂತರರನ್ನು ಹಾಗೂ ಭೂ ಮಾಪನಾ ಇಲಾಖೆಗಳಿಗೆ ಸಿಬ್ಬಂದಿ ನಿಯುಕ್ತಿಗೊಳಿಸಿದರೂ ಕರ್ತವ್ಯಕ್ಕೆ ಹಾಜರಾಗಲು ಹಿಂಜರಿಕೆ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಜನತೆಗೆ ಆಗುವ ಅನಾನುಕೂಲತೆಗಳನ್ನು ಗಮನಿಸಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಬಸ್ ಸಂಚಾರ: ಜನತೆಗೆ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಉಡುಪಿ ಆಸುಪಾಸಿನ ಪ್ರದೇಶಗಳಿಗೆ 30 ಸರ್ಕಾರಿ ಬಸ್ಸುಗಳಿಗೆ ಸರ್ಕಾರದ ಪರವಾನಗಿ ದೊರೆತಿದೆ. ಸರ್ಕಾರಿ ಆಸ್ಪತ್ರೆಯ ಸಮಸ್ಯೆ ಬಗೆಹರಿಸಲು ಶೀಘ್ರ ಎಲ್ಲ ಸಿಬ್ಬಂದಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು. ಮಳೆ ಹಿನ್ನಡೆಯಾದೊಡನೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಶೀಘ್ರದಲ್ಲೇ ಉಪವಿಭಾಗಾಧಿಕಾರಿ ನ್ಯಾಯಾಲಯ ಕಾರ್ಯಾರಂಭಗೊಳ್ಳಲಿದ್ದು, ವಾರದ 2 ದಿನ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಅದೇ ರೀತಿ ಪ್ರತಿಯೊಂದು ವಾರ್ಡ್ಗಳಲ್ಲಿ ಅಧಿಕಾರಿಗಳ ಉಪಸ್ಥಿತಿಯೊಂದಿಗೆ ಜನಸ್ಪಂದನ ಕಾರ್ಯಕ್ರಮ, ತ್ಯಾಜ್ಯ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದ ಶಾಸಕರು, ನಮೂನೆ 9 ಮತ್ತು 11ರ ದಾಖಲೆಗೆ ತಿದ್ದುಪಡಿ ತರಲಾಗಿದ್ದು, ಸುತ್ತೋಲೆ ಇನ್ನಷ್ಟೇ ಬರಬೇಕಾಗಿದೆ. ನಿವೇಶನದ ಶೇ.15ರಷ್ಟು ಭೂಮಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ನಿಯಮಗಳಿಗೆ 50 ಸೆಂಟ್ಸ್ವರೆಗೆ ರಿಯಾಯಿತಿ ನೀಡಲಾಗಿದ್ದು, ಇದರಿಂದ ಸಣ್ಣ ನಿವೇಶನದಾರರ ಸಮಸ್ಯೆ ಪರಿಹರಿಸಿದಂತಾಗುತ್ತದೆ ಎಂದರು.
ಸಭೆಯಲ್ಲಿ ನಗರಸಭಾಧ್ಯಕ್ಷ ಯುವರಾಜ್, ಪಕ್ಷದ ಮುಖಂಡರಾದ ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ಪ್ರಕಾಶ್ ಕೊಡವೂರು, ಕೇಶವ ಕೋಟ್ಯಾನ್, ದಿವಾಕರ ಕುಂದರ್, ಗೋಪಾಲ, ಗಣೇಶ್ ನೆರ್ಗಿ, ಯತೀಶ್ ಕರ್ಕೇರಾ, ಸುರೇಶ್ ಶೆಟ್ಟಿ ಬನ್ನಂಜೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

