ವೃತ್ತಿ ಸೇವಾ ಮಾಸಾಚರಣೆ
ಉಡುಪಿ: ವೃತ್ತಿಯನ್ನು ಗೌರವಿಸಿಕೊಂಡು ಶ್ರದ್ಧೆ, ಪ್ರಾಮಾಣಿಕತೆ ಮತ್ತು ವಿಶ್ವಾಸ ಪೂರ್ವಕವಾಗಿ ಕರ್ತವ್ಯ ನಿರ್ವಹಿಸುವುದು ನಾವು ಸಮಾಜಕ್ಕೆ ನೀಡುವ ಬಹುದೊಡ್ಡ ಸೇವೆಯಾಗಿದೆ ಎಂದು ರೋಟರಿಯ ಮಾಜಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪಾಧ್ಯಾಯ ಅಭಿಪ್ರಾಯಪಟ್ಟರು.
ಇಲ್ಲಿನ ರೋಟರಿ ವತಿಯಿಂದ ವೃತ್ತಿ ಸೇವಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ಜ್ಯೋತಿಷ್ಯ ಶಾಸ್ತ್ರ ಪ್ರವೀಣರಾದ ಉಡುಪಿಯ ವಲೇರಿಯನ್ ಸಲ್ದಾನ್ಹ, ಎಲೆಕ್ಟ್ರೀಕಲ್ ಮತ್ತು ಪಂಬ್ಲಿಂಗ್ ವೃತ್ತಿಯನ್ನು ನಿರ್ವಹಿಸಿಕೊಂಡು ಬರುತ್ತಿರುವ ಅಶೋಕ್ ಎಸ್. ಪೂಜಾರಿ ಹಾಗೂ ಕಂಪ್ಯೂಟರ್ ಡಿಸೈನಿಂಗ್ ಹಾಗೂ ಮುದ್ರಣದಲ್ಲಿ ಅನುಪಮ ಸೇವೆ ಸಲ್ಲಿಸಿದ ಬಿ. ಮುರಳಿ ಕೃಷ್ಣರಾವ್ ನಿಧಿಗ್ರಾಫಿಟೆಕ್ಸ್ ಇವರನ್ನು ಅಭಿನಂದಿಸಲಾಯಿತು.
ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ- 3180 ಬೆಂಗಳೂರಿನ ಸುಬ್ಬಾ ರಾವ್, ಜೊತೆ ಕಾರ್ಯದರ್ಶಿ ಅನಂತರಾಮ ಬಲ್ಲಾಳ್, ರಾಮಚಂದ್ರ ಉಪಾಧ್ಯಾಯ ಹಾಗೂ ಹರೀಶ್, ರೋಟರಿ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣ ಇದ್ದರು. ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ಸುಬ್ರಹ್ಮಣ್ಯ ಬಾಸ್ರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

