ಉಡುಪಿ

'ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣ'

Published On :

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಂ ತುಷ್ಟೀಕರಣಕ್ಕೆ ಮುಂದಾಗಿದ್ದು, ಹಿಂದೂಗಳ ಮೇಲೆ ದಮನ ನೀತಿ ಅನುಸರಿಸುತ್ತಿದೆ. ಮುಸ್ಲಿಮರು ಏನೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಮೀನ ಮೇಷ ಎಣಿಸುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಟೀಕಿಸಿದ್ದಾರೆ.
ಇಲ್ಲಿನ ಸಂತೆಕಟ್ಟೆಯಲ್ಲಿ ಶನಿವಾರ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನೇಜಾರಿನಲ್ಲಿ ಅಕ್ರಮವಾಗಿ ತಲೆ ಎತ್ತುತ್ತಿರುವ ಮಸೀದಿ ಮತ್ತು ಹಿಂದೂ ಕಾರ್ಯಕರ್ತನ ವಾಹನಕ್ಕೆ ಬೆಂಕಿ ಹಚ್ಚಿ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದೂ ಜಾಗರಣ ವೇದಿಕೆ ರಾಜ್ಯ ಸಹಸಂಚಾಲಕ ಸತ್ಯಜಿತ್ ಸುರತ್ಕಲ್ ಮಾತನಾಡಿ, ನೇಜಾರಿನಲ್ಲಿ ನಿರ್ಮಾಣವಾಗುತ್ತಿರುವುದು ಅಕ್ರಮ ಮಸೀದಿ ಎಂಬುದು ಗೊತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಅಲ್ಲಿ ನಡೆದಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯ ನೇಜಾರಿನಲ್ಲಿ ಮಸೀದಿ ನಿರ್ಮಾಣಕ್ಕೆ ತಡೆಯಾಜ್ಞೆ ತಂದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಹೀಗಿದ್ದಾಗಲೂ ಸಚಿವರು ಅಲ್ಲಿ ಇಫ್ತಾರ್ ಕೂಟ ನಡೆಯಲು ಅನುಮತಿಸಿದ್ದು ಹಾಗೂ  ಪಾಲ್ಗೊಂಡಿರುವುದು ಕಾನೂನಿನ ಉಲ್ಲಂಘನೆ ಎಂದರು.
ಭಜರಂಗದಳ ಮಂಗಳೂರು ವಿಭಾಗ ಸಂಚಾಲಕ ಶರಣ್ ಪಂಪ್ವೆಲ್ ಮಾತನಾಡಿ, ಹಿಂದೂ ಕಾರ್ಯಕರ್ತನ ಕಾರಿಗೆ ಬೆಂಕಿ ಹಚ್ಚಿದವರು ಯಾರು ಎಂದು ಹೇಳಿದರೂ ಅವರನ್ನು ಬಂಧಿಸುತ್ತಿಲ್ಲ, ಪೊಲೀಸರು ಹಿಂದೂ ವಿರೋಧಿ ರಾಜಕಾರಣಿಗಳ ಜೊತೆ ಶಾಮೀಲಾಗಿದ್ದಾರೆ ಎಂದು ದೂರಿದರು.
ಹಿಂದೂ ಜಾಗರಣ ವೇದಿಕೆಯ ವಿಜಯಕುಮಾರ್, ಹಿಂದೂ ಯುವಸೇನೆಯ ವಾಸುದೇವ ಭಟ್, ಹಿಂದೂ ಮುಖಂಡರಾದ ಅಚ್ಚುತ ಅಮೀನ್, ಸೋಮಯ್ಯ ಸುವರ್ಣ, ವಿನೋದ್ ಕುಮಾರ್, ಅರವಿಂದ ಕೋಟೇಶ್ವರ ಹಾಗೂ ಕೆಮ್ಮಣ್ಣು ಬಿಜೆಪಿ ಸ್ಥಾನೀಯ ಅಧ್ಯಕ್ಷ ಹರ್ಷವರ್ಧನ ಹೂಡೆ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.