ಉಡುಪಿ

12, 16, 20ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ

Published On :

ಉಡುಪಿ: ಜಿಲ್ಲೆಯ ನಗರ, ಪಟ್ಟಣ, ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸಲು ಚುನಾವಣಾಧಿಕಾರಿ ಹಾಗೂ ದಿನಾಂಕ ನಿಗದಿಪಡಿಸಲಾಗಿದೆ. ಉಡುಪಿ ನಗರಸಭೆಗೆ 12ರಂದು ಅಧ್ಯಕ್ಷ (ಅನುಸೂಚಿತ ಜಾತಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕುಂದಾಪುರ ಸಹಾಯಕ ಕಮೀಷನರ್ ಚುನಾವಣಾಧಿಕಾರಿಯಾಗಿರುತ್ತಾರೆ. ಕುಂದಾಪುರ ಪುರಸಭೆಗೆ 20ರಂದು ಅಧ್ಯಕ್ಷ (ಅನುಸೂಚಿತ ಜಾತಿ), ಉಪಾಧ್ಯಕ್ಷ (ಹಿಂದುಳಿದ ವರ್ಗ ಎ) ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕುಂದಾಪುರ ತಹಸೀಲ್ದಾರ್ ಚುನಾವಣಾಧಿಕಾರಿಯಾಗಿರುತ್ತಾರೆ. ಕಾರ್ಕಳ ಪುರಸಭೆಗೆ 16ರಂದು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಅನುಸೂಚಿತ ಜಾತಿ) ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾರ್ಕಳ ತಹಸೀಲ್ದಾರ್ ಚುನಾವಣಾಧಿಕಾರಿಯಾಗಿರುತ್ತಾರೆ. ಸಾಲಿಗ್ರಾಮ ಪಟ್ಟಣ ಪಂಚಾಯತಿಗೆ 17ರಂದು ಅಧ್ಯಕ್ಷ (ಅನುಸೂಚಿತ ಜಾತಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಉಡುಪಿ ತಹಸೀಲ್ದಾರ್ ಚುನಾವಣಾಧಿಕಾರಿಯಾಗಿರುತ್ತಾರೆ.
'ಬರವಣಿಗೆ ರೂಢಿಸಿಕೊಳ್ಳಿ'
ಮಣಿಪಾಲ: ಬರವಣಿಗೆಯನ್ನು ವಿದ್ಯಾರ್ಥಿ ದೆಸೆಯಲ್ಲಿ ಕೈಗತ ಮಾಡಿಕೊಳ್ಳಬೇಕು. ಯಾಕೆಂದರೆ, ಓದು ಮತ್ತು ಬರವಣಿಗೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಮಾಧವ ಪೈ ಸ್ಮಾರಕ ಕಾಲೇಜಿನ ಸಂವಹನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನ ಕೆನರಾ ಕಾಲೇಜಿ ಉಪನ್ಯಾಸಕ ರಘು ಇಡ್ಕಿದು ಮತ್ತು ಸಾಹಿತಿ ಮಹೇಶ್ ಆರ್. ನಾಯಕ್  ಸಂಪನ್ಮೂಲ ವ್ಯಕ್ತಿಗಳಾಗಿದ್ದರು.  ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ದಯಾನಂದ ಶೆಟ್ಟಿ ಉದ್ಘಾಟಿಸಿದರು.  ಪತ್ರಿಕೋದ್ಯಮ ವಿಭಾಗದ ಮುಖಸ್ಥ ಡೊಂಬಯ್ಯ ಇಡ್ಕಿದು, ವಿದ್ಯಾರ್ಥಿಗಳಾದ ಸುಶ್ಮಿತಾ ಕಾಮತ್, ಅನುಷ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.