ಎನ್ಎಸ್ಎಸ್ ಶಿಬಿರ ಪೂರ್ವಭಾವಿ ಸಭೆ
ಉಡುಪಿ: ಮೂಡುಬೆಳ್ಳೆ ಸಂತಲಾರೆನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 5 ರಿಂದ 11ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಬಾಲಯಕಿಯರ ಎನ್ಎಸ್ಎಸ್ ಶಿಬಿರದ ಪೂರ್ವಾಭಾವಿ ಸಭೆಯು ಇತ್ತೀಚಿಗೆ ಸಂತಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವ.ರೆ.ಫಾ. ಜೋಸ್ವಿ ಫೆರ್ನಾಡಿಸ್ ಅಧ್ಯಕ್ಷತೆಯಲ್ಲಿ ಜರುಗಿತು.
ಉಡುಪಿ ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಶಿಂಧಾ ಮಾತನಾಡಿ ರಾಜ್ಯಮಟ್ಟದ ಶಿಬಿರವನ್ನು ಆಯೋಜಿಸುವ ಅವಕಾಶ ಸಿಕ್ಕಿರುವುದು ನಮಗೆಲ್ಲರಿಗೂ ಸಂತಸದ ವಿಚಾರ. ಇಂತಹ ಶಿಬಿರಗಳು ಶಿಬಿರಾರ್ಥಿಗಳ ಸರ್ವತೋಮುಖ ಬೆಳವಣಿಗೆ ಪೂರಕವಾಗಿದ್ದು ಇದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ತಾಪಂ ಮಾಜಿ ಅಧ್ಯಕ್ಷ ಕೆ. ದೇವದಾಸ್ ಹೆಬ್ಬಾರ್, ಬ್ರಹ್ಮಾವರ ಎಸ್ಎಂಎಸ್ ಪಪೂ ಕಾಲೇಜಿನ ಪ್ರಾಂಶುಪಾಲ ಸಲ್ವದೋರ್ ನೊರೊನ್ಹಾ, ಮಲ್ಪೆ ಸಪಪೂ ಕಾಲೇಜಿನ ಪ್ರಾಂಶುಪಾಲ ಮೇಟಿ ಮುದಿಯಪ್ಪ, ಸಂತ ಲಾರೆನ್ಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಸಿಲ್ವೆಸ್ಟರ್ ಮತಾಯಸ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

